ಮಾಜಿ ಸಚಿವ ಬಿ.ಎ.ಮೊಹಿದ್ದೀನ್ ಇನ್ನಿಲ್ಲ

ಮಾಜಿ ಶಿಕ್ಷಣ ಸಚಿವ ಬಿ.ಎ.ಮೊಹಿದ್ದೀನ್(80) ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. 

Updated: Jul 10, 2018 , 11:06 AM IST
ಮಾಜಿ ಸಚಿವ ಬಿ.ಎ.ಮೊಹಿದ್ದೀನ್ ಇನ್ನಿಲ್ಲ

ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಬಿ.ಎ.ಮೊಹಿದ್ದೀನ್(80) ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. 

ಕೆಲ ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಮಂಗಳೂರಿನಲ್ಲಿ ನಡೆಸುವುದಾಗಿ ಮೂಲಗಳು ತಿಳಿಸಿವೆ. 

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಸದಸ್ಯರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಮೊಹಿದ್ದೀನ್ ಅವರು, 1978ರಲ್ಲಿ ಬಂಟ್ವಾಳ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಜನತಾ ಪರಿವಾರ ಸೇರಿದ ಮೊಹಿದ್ದೀನ್ ಅವರು, ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪಕ್ಷದಲ್ಲಾದ ಕೆಲ ಬದಲಾವಣೆಗಳಿಂದಾಗಿ ಮರಳಿ ಕಾಂಗ್ರೆಸ್ ಸೇರಿದ್ದರು.