ಬೆಂಗಳೂರು : ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್  ಪರೇಡ್ (Tractor Parade) ವೇಳೆ ನಡೆದ ಘರ್ಷಣೆ ಹಿಂಸಾರೂಪ ಪಡೆದುಕೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳುತ್ತಿದೆ. ಇದೀಗ, ದೆಹಲಿಯ ಕೆಂಪುಕೋಟೆ (Red Fort) ಮೇಲೆ ಧ್ವಜಾರೋಹಣ ಮಾಡಿರುವ ವ್ಯಕ್ತಿ ಬಿಜೆಪಿ ಕಾರ್ಯಕರ್ತೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING


ರೈತರ ಪ್ರತಿಭಟನೆಯಲ್ಲಿ(Farmer Protest) ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ (BJP) ಕಾರ್ಯಕರ್ತ‌ ಎಂಬುದು ಪುರಾವೆಸಹಿತ ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಇಂತಹ ಬಿಜೆಪಿ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


B.Sriramulu: 'ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ'


ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್ (Tractor Parade) ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಸರಣಿ ಟ್ವೀಟ್ (Tweet) ಮಾಡಿದ್ದಾರೆ. ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು (Farmers) ಪ್ರಾಣ ಕಳೆದುಕೊಂಡರೂ ರೈತ ವಿರೋಧಿ‌ ಕಾನೂನುಗಳನ್ನು ವಾಪಸು‌ ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಅವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ, ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.


Narendra Modi) ಅವರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಅಂತ ಅದಾನಿ, ಅಂಬಾನಿಗೆ (Ambani) ಮಾತು ಕೊಟ್ಟಿದ್ದಾರೆ, ಹೀಗಾಗಿ ರೈತರು ಎಷ್ಟೇ ಪ್ರತಿಭಟನೆ (Protest) ನಡೆಸಿದರೂ ಅವುಗಳನ್ನು ವಾಪಾಸು ಪಡೆಯುತ್ತಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ :B.C.Patil: 'ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಿರೋರು ಭಯೋತ್ಪದಕರು'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.