ಹಾಸನ: ರೈತರ ಸಲ ಮನ್ನಾ ವಿಚಾರದಲ್ಲಿ ಯಾವುದೇ ಅನುಮಾನ ಬೇಡ, ಇನ್ನು ಐದು ದಿನಗಳಲ್ಲಿ ರೈತರು ಸಿಹಿ ಸುದ್ದಿ ನಿರೀಕ್ಷಿಸಬಹುದು ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ರೈತರ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರೇವಣ್ಣ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ರೈತರ ಸಾಲ ಮನ್ನಾ ವಿಚಾರವಾಗಿ ಸಾಕಷ್ಟು ತಯಾರಿ ನಡೆಸಿದ್ದಾರೆ. ಜೂನ್ 5 ರಂದು ಬಜೆಟ್ ಮಂಡನೆಯಾಗಲಿದ್ದು ರೈತರಿಗೆ ಸಿಹಿ ಸುದ್ದಿ ನೀಡಲಿದ್ದಾರೆ ಎಂದು ಹೇಳಿದರು. 


ಮುಂದುವರೆದು ಮಾತನಾಡಿದ ಅವರು, ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್ ಜತೆ ಹೊಸ ಯೋಜನೆಗಳನ್ನು ಸಹ ಈ ಬಾರಿಯ ಬಜೆಟ್ನಲ್ಲಿ ಜಾರಿಗೆ ತರಲಾಗುವುದು. ಮಳೆಯಿಂದಾಗಿ ಸಂಪೂರ್ಣ ಹದಗೆಟ್ಟಿರುವ ಚಾರ್ಮಾಡಿ ಮತ್ತು ಆಗುಂಬೆ ಘಾಟ್ ರಸ್ತೆಗಳ ಅಭಿವೃದ್ದಿಗಾಗಿ 250 ಕೋಟಿ ರೂಪಾಯಿ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.