ಚಾಮರಾಜನಗರ: ಹರಿಯಾಣದ ಗಡಿಯಲ್ಲಿ ರೈತ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ  ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ರೈತ ಸಂಘಟನೆಗಳು ಜಾಥಾ ನಡೆಸಿ, ಪ್ರತಿಭಟನೆ ನಡೆಸಿದರು.


COMMERCIAL BREAK
SCROLL TO CONTINUE READING

ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತ ಹಾದು ಜಿಲ್ಲಾಡಳಿತ ಭವನದ ತನಕ ಜಾಥಾ ನಡೆಸಿದ ರೈತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.


ಇದನ್ನೂ ಓದಿ- ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ:ಹಗರಣ ಆರೋಪಕ್ಕೆ ಉತ್ತರ?


ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ. ಕನಿಷ್ಠ ಬೆಂಬಲ ಬೆಲೆ ನಿಗದಿ, ಫಸಲ್ ಬೀಮಾ‌ ಯೋಜನೆಯ ನೀತಿ ಬದಲಾಗಬೇಕು, ರೈತರ ಸಾಲಮನ್ನಾ ಮಾಡಬೇಕು ಎಂದು ಅಮರಣಾಂತ ಉಪವಾಸದ ಮೂಲಕ ರೈತರು ಹೋರಾಟಕ್ಕೆ ಮುಂದಾದರೇ ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದರು.


ಇದನ್ನೂ ಓದಿ- ವೃಷಭಾವತಿ ನದಿ ಉಗಮ ಸ್ಥಾನಕ್ಕೆ ಮರುಜೀವ; ಪಾರಂಪರಿಕ ಕಾರಿಡಾರ್ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್


ಬೈಕ್ ರ್ಯಾಲಿ: ಕೃಷಿಯನ್ನು ಕಾರ್ಪೊರೇಟ್ ಕಂಪನಿಗಳ ಕೈಗೆ ಒಪ್ಪಿಸಬಾರದು, ಕೃಷಿ ಉಪಕರಣಗಳ ಮೇಲಿನ ಜಿಎಸ್ಟಿಯನ್ನು ತೆಗೆದು ಹಾಕಬೇಕು ಜೊತೆಗೆ ರೈತ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ರೈತರ ಸಂಯುಕ್ತ ಹೋರಾಟ ಸಮಿತಿಯು ಚಾಮರಾಜನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿ ಆಕ್ರೋಶ ಹೊರಹಾಕಿದರು.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.