ಮಂಡ್ಯ: ಬೃಂದಾವನ ಅಣೆಕಟ್ಟಿಗೆ ಮೈಸೂರು ಮಹಾರಾಜರು ಅದ್ಭುತವಾಗಿ ನಿರ್ಮಾಣ ಮಾಡಿದ್ದರು. ಆರ್.ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಸೋಮವಾರ KRS ಅಣೆಕಟ್ಟಿಗೆ ಬಾಗಿನ ಸಮರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾ ಆರತಿಗಿಂತ ಮಿಗಿಲಾಗಿ ಪ್ರತಿವಾರ ಕಾವೇರಿ ಆರತಿ ಮಾಡಲಾಗುವುದು. ಈ ಕಾರ್ಯಕ್ರಮವನ್ನು ಆದಷ್ಟು ಬೇಗ ಪ್ರಾರಂಭ ಮಾಡಲಾಗುವುದು. ಈಗಾಗಲೇ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಕಾವೇರಿ ಜಲಾನಯದ ಪ್ರದೇಶದ ಶಾಸಕರ ಹಾಗೂ ಸಂಬಂಧಪಟ್ಟ ಇಲಾಖೆಗಳನ್ನು ಸೇರಿಸಿ ಸಮಿತಿ ರಚಿಸಲಾಗಿದೆ ಎಂದರು. 


COMMERCIAL BREAK
SCROLL TO CONTINUE READING

ರೈತರ ಜಮೀನನ್ನು ಒತ್ತಾಯ ಪೂರ್ವಕವಾಗಿ ವಶಪಡಿಸಿಕೊಳ್ಳುವುದಿಲ್ಲ


ರೈತರು ಬೃಂದಾವನಕ್ಕೆ ಹೊಸರೂಪ ನೀಡುವ ಮೊದಲು ನಮ್ಮ ಜೊತೆ ಚರ್ಚೆ ನಡೆಸಿ ಎಂದು ಹೇಳಿದ್ದಾರೆ. ಯಾವುದೇ ಮುಚ್ಚುಮರೆಯಿಲ್ಲದೇ ಇದರ ಅಭಿವೃದ್ಧಿ ಮಾಡಲಾಗುವುದು ಹಾಗೂ ಅವರ ಜೊತೆ ಚರ್ಚೆ ನಡೆಸಲಾಗುವುದು. ಯಾರ ಜಮೀನನ್ನು ವಶಪಡಿಸಿಕೊಳ್ಳುವುದಿಲ್ಲ. ಸರ್ಕಾರದ ಜಮೀನಿನಲ್ಲೇ ಅಭಿವೃದ್ಧಿ ಮಾಡಲಾಗುವುದು. ಇಷ್ಟವಿದ್ದವರು ಜಮೀನು ನೀಡಬಹುದು, ಯಾರಿಗೂ ಒತ್ತಾಯ ಮಾಡುವುದಿಲ್ಲ. ಅಣೆಕಟ್ಟಿನ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗುವುದು. ಸ್ಥಳೀಯ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರು ನೀರಾವರಿಗೆ ಸಂಬಂಧಿಸಿದಂತೆ ಅನೇಕ ಮನವಿಗಳನ್ನು ಸಲ್ಲಿಸಿದ್ದಾರೆ. ಅವರ ಮನವಿಗಳನ್ನು ಶೀಘ್ರವೇ ಪರಿಗಣಿಸಲಾಗುವುದು ಎಂದು ಹೇಳಿದರು.


ಕಾವೇರಿ ಸಂಪೂರ್ಣ ಭರ್ತಿ: ಸಿಎಂ ಸಿದ್ದರಾಮಯ್ಯರಿಂದ ನದಿಗೆ ಬಾಗಿನ


ಪ್ರತಿವರ್ಷ ಐದು ಮಂದಿಗೆ ಪ್ರಶಸ್ತಿ


ಕಬಿನಿ, ಕೆಆರ್‌ಎಸ್, ಹೇಮಾವತಿ ವಿಭಾಗದಲ್ಲಿ ೩ ಜನ ರೈತರು ಹಾಗೂ ಒಬ್ಬ ಪ್ರಗತಿಪರ ರೈತ ಮತ್ತು ಕಿರಿಯ ಎಂಜಿನಿಯರ್ ಅವರಿಗೆ ಕಾವೇರಿ ನೀರಾವರಿ ನಿಗಮದಿಂದ ಪ್ರಶಸ್ತಿ ನೀಡಲಾಗುವುದು ಎಂದು ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.


ಕಾವೇರಿಗೆ ಬಾಗಿನ ಅರ್ಪಣೆಗೂ ಮುನ್ನ ಕೆಆರ್‌ಎಸ್ ಅಣೆಕಟ್ಟಿನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅತಿಥಿಗೃಹದ ಬಳಿ ಉತ್ತರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ʼಪ್ರಸ್ತುತ ಮಳೆ ಕಡಿಮೆಯಾಗಿದೆ. ಕಾವೇರಿ ನದಿ ತೀರದ ಪ್ರದೇಶಗಳ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ತಮಿಳುನಾಡಿದ ಸಿಎಂ ಅವರ ರಾಜ್ಯಗಳ ಕೆರೆಗಳನ್ನು ತುಂಬಿಸಲು ಸೂಚನೆ ನೀಡಿದ್ದಾರೆ. ನಾವು ನಮ್ಮ ರಾಜ್ಯದ ಕೆರೆಗಳನ್ನು ತುಂಬಿಸಲಾಗುತ್ತಿದೆ. ನಮ್ಮ ರೈತರನ್ನು ನಾವು ಕಾಪಾಡುತ್ತೇವೆ. ತಮಿಳುನಾಡಿಗೆ ಹಾಗೂ ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲಿ. ಹೆಚ್ಚು ಕಾವೇರಿ ನೀರನ್ನು ಬಳಸಿಕೊಳ್ಳುವ ವಿಚಾರವಾಗಿ ಚರ್ಚೆ ನಡೆಸಬೇಕಾಗಿದೆ ಎಂದರು. ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿಚಾರವಾಗಿ ಕೇಳಿದಾಗ “ಮೊದಲು ಭೂತಾಯಿ ಮತ್ತು ವರುಣದೇವನಿಗೆ ಪೂಜೆ ಸಲ್ಲಿಸೋಣ. ಆನಂತರ ರಾಜಕಾರಣ ಮಾತನಾಡೋಣ” ಎಂದು ಹೇಳಿದರು.


ಇದನ್ನೂ ಓದಿ: ಅತ್ಯಾಚಾರಕ್ಕೊಳಗಾದವರನ್ನು ಮಹಿಳಾ ವೈದ್ಯರು ಪರೀಕ್ಷಿಸಲು ಅವಕಾಶ ಕಲ್ಪಿಸುವಂತೆ ತಿದ್ದುಪಡಿ ತರಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.