ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ರದ್ಧತಿಗೆ ಒತ್ತಾಯಿಸಿ ‘ದಿಲ್ಲಿ ಚಲೋ’ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ದೆಹಲಿ ಪ್ರವೇಶ ನಿರ್ಬಂಧ ಮಾಡಿರುವ ಹಿನ್ನೆಲೆ ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ಆಕ್ರೋಶ ಹೊರಹಾಕಿದೆ.
ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಾಳೆಯಿಂದ ರೈತ(Farmers)ರ ಚಳವಳಿಸಿ ಬೆಂಬಲಿಸಿ ಪ್ರತಿಭಟನೆ ನಡೆಯಲಿದ್ದು, ರಾಜ್ಯದಲ್ಲಿ ಹೆದ್ದಾರಿ ಬಂದ್ ಚಳವಳಿ ಆರಂಭವಾಗಲಿದೆ.
ಕರ್ನಾಟಕದ ಬಡ ಮಕ್ಕಳ ಚಿಕಿತ್ಸೆಗೆ ಮಿಡಿದ ಸಚಿನ್ ತೆಂಡುಲ್ಕರ್ ಹೃದಯ!
ನಾಳೆಯಿಂದ 5 ದಿನ ರಾಜ್ಯದ ಎಲ್ಲಾ ಜಿಲ್ಲೆಗಳ ಹೆದ್ದಾರಿ ಬಂದ್ ಮಾಡಿ ಡಿಸೆಂಬರ್ 7 ರಂದು ಸಾವಿರಾರು ರೈತರಿಂದ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದೆ.
'2013ರಲ್ಲಿ ಆದಂತೆ ಬಿಜೆಪಿ ಮತ್ತೆ ಇಬ್ಭಾಗವಾಗಲಿದೆ'
ರಾಷ್ಟ್ರ ರಾಜಧಾನಿಯಲ್ಲಿ ಸಹಸ್ರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, ರಾಷ್ಟ್ರ ರಾಜಧಾನಿ ಪ್ರವೇಶದ ಐದು ಪ್ರವೇಶದ್ವಾರಗಳನ್ನು ಬಂದ್ ಮಾಡುವುದಾಗಿ ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ರೈತರ ಪ್ರತಿಭಟನೆಗೆ ವಿವಿಧ ಭಾಗಗಳಲ್ಲಿರುವ ರೈತರೂ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ದೆಹಲಿಗೆ ಸಮೀಪ ಇರುವ ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.