ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಮೂಲಕ ಸ್ವಯಂ ದಾಖಲಿಸುವ ವಿನೂತನ ಯೋಜನೆಯನ್ನು ಪ್ರಾರಂಭಿಸಲಾಗಿದೆ.


COMMERCIAL BREAK
SCROLL TO CONTINUE READING

ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆಯ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದ್ದು, ಸಂಗ್ರಹವಾದ ಬೆಳೆಗಳ ಮಾಹಿತಿಯನ್ನು ತಾಲೂಕ ಆಡಳಿತ ಪರಿಶೀಲಿಸಲಿದೆ.


ದಾಖಲಿಸುವ ವಿಧಾನ: ರೈತರು ಸ್ಮಾರ್ಟಫೋನ್ ಉಪಯೋಗಿಸಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ನ್ನು ಗೂಗಲ್‍ನ “ಪ್ಲೇ ಸ್ಟೋರ್ ದಿಂದ ಡೌನಲೋಡ್ ಮಾಡಿಕೊಳ್ಳಬೇಕು ಅಥವಾ ರೈತರ ಪರವಾಗಿ ಅವರ ಕುಟುಂಬದ ಸದಸ್ಯರು, ಸಂಬಂಧಿಕರು ಅಥವಾ ಮೊಬೈಲ್ ಮಾಹಿತಿ ಹೊಂದಿರುವ ಕಂದಾಯ, ಕೃಷಿ ಇಲಾಖೆ ವತಿಯಿಂದ ನಿಯೋಜನೆಗೊಂಡ, ಮಾಹಿತಿ ತಂತ್ರಜ್ಞಾನದ ತಿಳುವಳಿಕೆ ಇರುವ ತಮ್ಮದೆ ಗ್ರಾಮದ ಯುವಕರ (ಖಾಸಗಿ ನಿವಾಸಿ-ಪಿ.ಆರ್) ಸಹಾಯದೂಂದಿಗೆ ರೈತರು ತಮ್ಮ ಮೊಬೈಲ್ ಸಂಖ್ಯೆಗೆ ಓಟಿಪಿ (ಔಖಿP) ಪಡೆಯುವ ಮೂಲಕ ತಮ್ಮ ಜಮೀನುಗಳಲ್ಲಿ (ಹಿಸ್ಸಾವಾರು) ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ದಾಖಲಿಸಬಹುದಾಗಿದೆ.


ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ದಾಖಲಿಸದೇ ಇದ್ದ ಪಕ್ಷದಲ್ಲಿ ಪ್ರತಿ ಗ್ರಾಮಕ್ಕೆ ನಿಯೋಜನೆಗೊಂಡ ಬೆಳೆ ಸಮೀಕ್ಷಕರು (ಖಾಸಗಿ ನಿವಾಸಿ-ಪಿ.ಆರ್) ತಮ್ಮ ಹೊಲಗಳಿಗೆ ಭೇಟಿ ನೀಡಿ ಮೊಬೈಲ್ ಆ್ಯಪ್ ಬಳಸಿ ಬೆಳೆ ಮಾಹಿತಿ ಸಂಗ್ರಹಿಸಿ ಅಪಲೋಡ್ ಮಾಡುತ್ತಾರೆ.


ರೈತರು ಕೂಡಲೇ ಕಾರ್ಯಪ್ರವೃತ್ತರಾಗಿ ತಮ್ಮ ಜಮೀನಿನ ಬೆಳೆ ವಿವರಗಳನ್ನು ಹಂಗಾಮುವಾರು ಮೊಬೈಲ್ ಮೂಲಕ ಸ್ವಯಂ ದಾಖಲಿಸಬೇಕು. ಬೆಳೆಗಳ ವಿವರಗಳನ್ನು ದಾಖಲಿಸಲು ವಿಫಲರಾದರೆ ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ರೈತರಿಗೆ ತಾಂತ್ರಿಕ ಅಡಚಣೆ ಉಂಟಾಗಬಹುದಾಗಿದೆ.


ಬೆಳೆ ಸಮೀಕ್ಷೆ ಉದ್ದೇಶ: ಬೆಳೆ ಸಮೀಕ್ಷೆ ಯೋಜನೆಯಡಿ ಸಂಗ್ರಹವಾಗುವ ಮಾಹಿತಿಯನ್ನು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ (ಓಆಖಈ/Sಆಖಈ) ಅಡಿಯಲ್ಲಿ ಸಹಾಯಧನ ನೀಡಲು, ವರದಿ ತಯಾರಿಸಲು ಬೆಳೆ ವಿಮೆ ಯೋಜನೆಯಡಿ ನೊಂದಾಯಿತ ರೈತರ ತಾಕು ಹಂತದ ಬೆಳೆ ಪರಿಶೀಲಿಸಲು, ಕನಿಷ್ಠ ಬೆಂಬಲ ಬೆಲೆ ನಿಗದಿ ಮತ್ತು ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಹಾಯವಾಗುತ್ತದೆ. ಸರ್ಕಾರದ ಯೋಜನೆಗಳಲ್ಲಿ ಬಳಸಲು ತೀರ್ಮಾನಿಸಲಾಗಿದೆ. ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ (ಪಹಣಿಯಲ್ಲಿ)
ಸಾಂಖ್ಯಿಕ ಇಲಾಖೆಯ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆ ವಿಸ್ತೀರ್ಣ ಲೆಕ್ಕಾಚಾರ ಮತ್ತು ಎಣಿಕೆ ಕಾರ್ಯದಲ್ಲಿ ಈ ಮಾಹಿತಿಯನ್ನು ಬಳಸಲು ಅನುಮತಿಸಲಾಗಿದೆ.


ಎಲ್ಲಾ ರೈತರು ತಮ್ಮ ಜಮೀನುಗಳಲ್ಲಿ (ಹಿಸ್ಸಾವಾರು) ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ನಲ್ಲಿ ಕೊನೆಯ ದಿನಾಂಕದವರೆಗೆ ಕಾಯದೇ ಕೂಡಲೇ ಬೆಳೆಗಳ ಮಾಹಿತಿಯನ್ನು ನಿಗದಿತ ಸಮಯದೊಳಗೆ ಸ್ವಯಂ ದಾಖಲಿಸಬೇಕು.


ಹೆಚ್ಚಿನ ವಿವರಗಳಿಗಾಗಿ ಈ ಕಾರ್ಯಕ್ಕಾಗಿ ನಿಯೋಜನೆಗೊಂಡ ತಮ್ಮದೇ ಗ್ರಾಮದ ಖಾಸಗಿ ಸಮೀಕ್ಷಾಗಾರರನ್ನು (ಪಿ.ಆರ್) ಸಂಪರ್ಕಿಸಬಹುದಾಗಿದೆ. ಮುಂಗಾರು ಹಂಗಾಮಿನ ಬೆಳೆ ಸಮಿಕ್ಷೆ ವಿವರಗಳನ್ನು ಅಗಷ್ಟ 10 ರಿಂದ 24 ರೊಳಗೆ ಅಪ್ ಲೋಡ್ ಮಾಡಿ ದಾಖಲಿಸಲು ಕಾಲಾವಧಿಯನ್ನು ನಿಗಧಿಪಡಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಧಾರವಾಡ ಉಪ ಕೃಷಿ ನಿರ್ದೇಶಕರು ದೂ: 8277931271, ಸಹಾಯಕ ಕೃಷಿ ನಿರ್ದೇಶಕರು ದೂ: 8277931285, ಹುಬ್ಬಳ್ಳಿ ಉಪ ಕೃಷಿ ನಿರ್ದೇಶಕರು ದೂ: 8277931272, ಸಹಾಯಕ ಕೃಷಿ ನಿರ್ದೇಶಕರು ದೂ: 8277931288, ಕಲಘಟಗಿ ಸಹಾಯಕ ಕೃಷಿ ನಿರ್ದೇಶಕರು ದೂ: 8277931291, ಕುಂದಗೋಳ ಸಹಾಯಕ ಕೃಷಿ ನಿರ್ದೇಶಕರು ದೂ: 8277931294, ನವಲಗುಂದ ಸಹಾಯಕ ಕೃಷಿ ನಿರ್ದೇಶಕರು ದೂ: 8277931295 ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ರಾಜಶೇಖರ.ಐ.ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.