ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಅತಿಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರಗಾಲ ಹಾಗೂ ಬೆಳೆ ನಷ್ಟದಿಂದ ಪ್ರಾಣ ಕಳೆದುಕೊಂಡವರು ಬಿಜೆಪಿ ಅವಧಿಯಲ್ಲಿ ಒಟ್ಟು 849 ಅನ್ನದಾತರು ಪ್ರಾಣ ಬಿಟ್ಟಿದ್ದಾರೆ. 2022-23ನೇ ಸಾಲಿನ ರೈತರ ಆತ್ಮಹತ್ಯೆ ವರದಿಯಲ್ಲಿ ಈ ಮಾಹಿತಿ ಬಹಿರಂಗೊಂಡಿದೆ.   


COMMERCIAL BREAK
SCROLL TO CONTINUE READING

ಬಿಜೆಪಿ ಅವಧಿಯಲ್ಲಿ ಅತ್ಯಧಿಕ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಪ್ರಿಲ್ 1 2022ರಿಂದ ಮಾರ್ಚ್ 31 2023ರವರೆಗೆ ಒಟ್ಟು 968 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 111 ರೈತರ ಆತ್ಮಹತ್ಯೆ ಪ್ರಕರಣಗಳು ತಿರಸ್ಕೃತಗೊಂಡಿವೆ. ಹೀಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಟ್ಟು 849 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿ ತಿಳಿಸಿದೆ.


ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ


ಕಾಂಗ್ರೆಸ್ ಅವಧಿಯಲ್ಲಿ 174 ರೈತರ ಆತ್ಮಹತ್ಯೆ!


ಬಿಜೆಪಿ ಸರ್ಕಾರದ ಅವಧಿಯಲ್ಲಿ 849 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ,  ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 174 ಅನ್ನದಾತರು ಪ್ರಾಣಬಿಟ್ಟಿದ್ದಾರೆ. ಏಪ್ರಿಲ್ 1 2023ರಿಂದ ಸೆಪ್ಟೆಂಬರ್ 9 2023ರವರೆಗೆ ಒಟ್ಟು 250 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪ್ರಕರಣ ದಾಖಲಾಗಿವೆ. ಈ ಪೈಕಿ 18 ಪ್ರಕರಣಗಳು ತಿರಸ್ಕೃತಗೊಂಡಿವೆ. ಹೀಗಾಗಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಟ್ಟು 174 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ವಿಜಯಪುರದಲ್ಲಿ ಗೋಮಾತೆಗೆ ಸೀಮಂತ ಕಾರ್ಯ...!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.