ನಾಳೆ ರೈತರಿಂದ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಬಂದ್
ರಾಜ್ಯದ ಕಬ್ಬಿನ ಬೆಳೆಗಾರು ಬೆಲೆ ಏರಿಕೆ ಮಾಡಬೇಕೆಂದು ಆಗ್ರಹಿಸಿ ನಾಳೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಲಿದ್ದಾರೆ.
ಬೆಂಗಳೂರು: ರಾಜ್ಯದ ಕಬ್ಬಿನ ಬೆಳೆಗಾರು ಬೆಲೆ ಏರಿಕೆ ಮಾಡಬೇಕೆಂದು ಆಗ್ರಹಿಸಿ ನಾಳೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಲಿದ್ದಾರೆ.
ಇದನ್ನೂ ಓದಿ : PM Kisan ಯೋಜನೆಯಲ್ಲಿ ಪತಿ-ಪತ್ನಿ ಇಬ್ಬರಿಗೂ ಸಿಗುತ್ತಾ 6,000 ರೂ.! ನಿಯಮ ಏನು ಹೇಳುತ್ತೆ?
ನಾಳೆ ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ರಾಜ್ಯದ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಬಂದ್ ಆಗಲಿವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. “ಸರ್ಕಾರ ಇಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿದೆ.ನಾಳೆ ರಾಜ್ಯದ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡ್ತಿವಿ.ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂದ್ ಮಾಡಲು ತೀರ್ಮಾನ ಮಾಡಲಾಗಿದೆ” ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : UK Prime Minister: ಇಂಗ್ಲೆಂಡ್‌ನ ನೂತನ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ
ಈಗಾಗಲೇ ಧಾರವಾಡ, ಬಿಜಾಪುರ, ಬಾಗಲಕೋಟೆ,ದಾವಣಗೆರೆ,ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ರಸ್ತೆ ತಡೆ ಮಾಡಲು ಸಿದ್ದತೆ ಗಳನ್ನು ಮಾಡಿಕೊಳ್ಳುತ್ತಿದ್ದಾರೆ.ನಾಳೆ ಬೆಳಗ್ಗೆ ಮತ್ತಷ್ಟು ಜಿಲ್ಲೆಗಳಲ್ಲಿ ಹೆದ್ದಾರಿ ತಡೆಯಲಾಗುತ್ತದೆ.ಪ್ರಯಾಣಿಕರು ಜನಸಾಮಾನ್ಯರು ರೈತರ ಹಿತದೃಷ್ಟಿಯಿಂದ ಸಹಕಾರ ಕೊಡಬೇಕು ಹಲವಾರು ಬಾರಿ ಪ್ರತಿಭಟನೆ ಮಾಡಿ, ಮನವಿ ನೀಡಿದ್ರು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ.ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳದಿದ್ರೆ ಈ ತಿಂಗಳ 31 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಮುತ್ತಿಗೆ ಹಾಕಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.