ಮಂಡ್ಯ: ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಇದಕ್ಕೆ ಸಂಸದ ಹಾಗೂ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೆಆರ್ ಎಸ್ ಅಣೆಕಟ್ಟೆಯಲ್ಲಿ ನೀರು ಖಾಲಿಯಾಗುತ್ತಿದ್ದು, ರಾಜ್ಯದ ರೈತರಿಗೆ ಅಗತ್ಯವಾದ ನೀರಿನ ಪೂರೈಕೆ ಅಸಾಧ್ಯವಾಗಿದೆ. ಹೀಗಿರುವಾಗ ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. 


ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ ನೀರಿಲ್ಲದೆ ರೈತರ ಬೆಳೆಗಳು ಒಣಗುತ್ತಿವೆ. ಈ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್'ಗೆ ಮನವರಿಕೆ ಮಾಡಿಕೊಡಬೇಕು. ಒಂದು ವೇಳೆ ತಮಿಳುನಾಡಿಗೆ ನೀರು ಬಿಟ್ಟರೆ, ರಾಜ್ಯದ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಕ್ತ ಕುಡಿಯುತ್ತಾರೆ. ರಾಜ್ಯ ಸರ್ಕಾರದ ವಿರುದ್ಧ ತೀವ್ರ ಹೊರಾಟ ಕೈಗೊಳ್ಳಬೇಕಾಗುತ್ತದೆ ಎದ್ನು ಮಾದೇಗೌಡರು ಎಚ್ಚರಿಸಿದರು. 


ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನದಿ ನೀರು ನಿರ್ವಹಣೆ ಮಂಡಳಿ (ಸಿಎಂಬಿ) ರಚನೆಗೆ ಸ್ಕೀಂ ಸಿದ್ಧಪಡಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೀಡಿದ್ದ ಗಡುವು ಇಂದಿಗೆ(ಮೇ 3) ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ 4 ಟಿಎಂಸಿ ನೀರು ಬಿಡಲೇಬೇಕು ಎಂದು ಆದೇಶಿಸಿತ್ತು.