ಚಾಮರಾಜನಗರ : ಹೆತ್ತ ಮಗಳ ಮೇಲೆ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ್ದ ಕಾಮುಕ ತಂದೆಗೆ ಚಾಮರಾಜನಗರ ಜಿಲ್ಲಾ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಿತಾವಧಿ ತನಕ ಜೈಲು ಶಿಕ್ಷೆ ವಿಧಿಸಿದೆ.
ಚಾಮರಾಜನಗರ ಜಿಲ್ಲೆಯ 48 ವರ್ಷದ ವಿಕೃತ ಕಾಮುಕ ತಂದೆ ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತ ಮಗಳ ಮೇಲೆ ಈತ ಅತ್ಯಾಚಾರ ಎಸಗಿ, ನಿರಂತರ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ್ದ ಈ ಸಂಬಂಧ ಚಾಮರಾಜನಗರ ಠಾಣೆಯೊಂದರಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: Kolar ATM Robbery: ಗ್ಯಾಸ್ ಕಟರ್ ಬಳಸಿ ATMನಲ್ಲಿದ್ದ 15 ಲಕ್ಷ ದರೋಡೆ..!
ವಾದ-ಪ್ರತಿವಾದ ಆಲಿಸಿ ನ್ಯಾ.ನಿಶಾರಾಣಿ ಅವರು ವ್ಯಕ್ತಿಯ ಆರೋಪ ಸಾಬೀತಾಗಿದ್ದರಿಂದ 48 ವರ್ಷದ ಅಪರಾಧಿಗೆ ಆತನ ಜೀವಿತಾವಧಿ ತನಕ ಜೈಲುಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದರು. ಇನ್ನು, ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರವು 6 ಲಕ್ಷ ರೂ. ಪರಿಹಾರವನ್ನು 30 ದಿನದೊಳಗಾಗಿ ಕೊಡಬೇಕೆಂದು ನ್ಯಾಯಾಧೀಶರು ಸೂಚನೆ ಕೊಟ್ಟಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.