BIG NEWS: ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ!

ನಾಳೆ(ಜ.24) ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.

Last Updated : Jan 23, 2021, 08:34 PM IST
  • ಎಫ್​ಡಿಎ ಪರೀಕ್ಷೆ ನಡೆಯುವ ದಿನಾಂಕವನ್ನು ಮರುನಿಗದಿ ಮಾಡಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
  • ನಾಳೆ(ಜ.24) ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.
  • ನಾಳೆ ಅಂದರೆ 2021ರ ಜನವರಿ 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು.
BIG NEWS: ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ! title=

ಬೆಂಗಳೂರು: ನಾಳೆ(ಜ.24) ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.

2020ರ ಜನವರಿ 31ರ ಅಧಿಸೂಚನೆಯನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ(Job) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ನಾಳೆ ಅಂದರೆ 2021ರ ಜನವರಿ 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು.

Ramesh Jarkiholi: ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ರೆಸಾರ್ಟ್ ನಲ್ಲಿ ಅತೃಪ್ತರ ಗೌಪ್ಯಸಭೆ..!

ಪರೀಕ್ಷೆಗೂ ಮುನ್ನಾದಿನ ಅಂದ್ರೆ ಶನಿವಾರವೇ ಭಾನುವಾರ ಎರಡು ಅಧಿವೇಶನಗಳಲ್ಲಿ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದು ಬಂದಿದೆ. ಹಾಗಾಗಿ ಭಾನುವಾರ ನಡೆಯಬೇಕಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BJP: 'ನಮ್ಮದು ಬಾಂಬೆ ಟೀಮ್‌ ಅಲ್ಲ, ನಾವೀಗ ಬಿಎಸ್ ವೈ, ಬಿಜೆಪಿ ಟೀಮ್'

ಎಫ್​ಡಿಎ ಪರೀಕ್ಷೆ ನಡೆಯುವ ದಿನಾಂಕವನ್ನು ಮರುನಿಗದಿ ಮಾಡಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಅಕ್ರಮ ಗಣಿಗಾರಿಕೆಗೆ ಸಿಎಂ ಯಡಿಯೂರಪ್ಪ ಕುಮ್ಮಕ್ಕು: Siddaramaiah

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News