‘I.N.D.I.A’ದ ಭಯಕ್ಕೆ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ಲೇವಡಿ
ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು. ನಮ್ಮ ದೇಶದ ನಗದಿನ ಮೇಲೆ ಇಂಡಿಯಾ ಅಂತಾ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ’ ಎಂದು ಡಿಕೆಶಿ ಕುಟುಕಿದ್ದಾರೆ.
ಕನಕಪುರ: ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಇಂಡಿಯಾವನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಕನಕಪುರದಲ್ಲಿ ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆಶಿ, ‘ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು. ನಮ್ಮ ದೇಶದ ನಗದಿನ ಮೇಲೆ ಇಂಡಿಯಾ ಅಂತಾ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ’ ಎಂದು ಕುಟುಕಿದ್ದಾರೆ.
ಇದನ್ನೂ ಓದಿ: ತಮಿಳುನಾಡಿನ ನಟೋರಿಯಸ್ ರೌಡಿ ಮೇಲೆ ಡೆಡ್ಲಿ ಅಟ್ಯಾಕ್
‘ನಾವೆಲ್ಲರೂ ಭಾರತೀಯರೇ. ಸೋಲಿಗೆ ಹೆದರಿ ಈ ರೀತಿ ಮಾಡುತ್ತಿರುವುದು ಸರಿಯಲ್ಲ. ಅವರ ಆಲೋಚನೆಗಳು ಇನ್ನು ಬಹಳ ಇದ್ದಾವೆ. ಅವುಗಳನ್ನು ಈಗ ಹೇಳಿದರೆ ಎಲ್ಲರೂ ಶಾಕ್ ಆಗುತ್ತಾರೆ. ಅವುಗಳನ್ನು ಬೇರೆ ಸಮಯದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಈ ಪ್ರಸ್ತಾವನೆಯನ್ನು ವಿರೋಧಿಸುತ್ತೇನೆ. ಇಂತಹ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ನೀವು ಹೆಚ್ಚು ದಿನ ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ. ಇದನ್ನು ಮಾಡಬೇಡಿ’ ಎಂದು ಡಿಕೆಶಿ ಹೇಳಿದರು.
ವಿರೋಧ ಪಕ್ಷಗಳ ಮೈತ್ರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ವಿರೋಧ ಪಕ್ಷಗಳ I.N.D.I.A ಮೈತ್ರಿಕೂಟ ಬೆಂಗಳೂರಿನಲ್ಲಿ ಹುಟ್ಟಿತು. ಬೆಂಗಳೂರಿನಲ್ಲಿ ಬದಲಾವಣೆ ಆರಂಭವಾಯಿತು. ಇದೇ ತಿಂಗಳು 16 ಮತ್ತು 17ರಂದು ತೆಲಂಗಾಣದ ಹೈದರಾಬಾದ್‍ನಲ್ಲಿ ಸಭೆ ಸೇರುತ್ತಿದ್ದು, ಎಲ್ಲಾ ಮೈತ್ರಿ ಪಕ್ಷಗಳು ಸೇರಿ ಮುಂದಿನ ತೀರ್ಮಾನ ಮಾಡಲಿವೆ’ ಎಂದು ತಿಳಿಸಿದರು.
ಇದನ್ನೂ ಓದಿ: ನಿಗಮ ಮಂಡಳಿಗಳಲ್ಲಿ ಶಾಸಕರು, ಕಾರ್ಯಕರ್ತರಿಗೆ ಅವಕಾಶ: ಡಿಸಿಎಂ ಡಿ.ಕೆ.ಶಿವಕುಮಾರ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.