ಬೆಂಗಳೂರು: ಹೊಸಕೋಟೆ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಮಾಡಲು ಶಾಸಕ ಶರತ್ ಬಚ್ಚೇಗೌಡ (Sharat Bacchegouda) ಹಾಗೂ ಸಚಿವ ಎಂಟಿಬಿ ನಾಗರಾಜ್ (MTB Nagaraj) ನಡುವೆ ಜಟಾಪಟಿ ನಡೆದಿದ್ದು, ಕೈ-ಕೈ ಮಿಲಾಯಿಸುವ ಹಂತಕ್ಕೆ ಜಗಳ ತಲುಪಿದಾಗ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಇದನ್ನೂ ಓದಿ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ, ಶೀಘ್ರ ವಿಚಾರಣೆ ನಡೆಸುವಂತೆ ಕಪಿಲ್ ಸಿಬಲ್ ಆಗ್ರಹ
ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಟಿಬಿ ನಾಗರಾಜ್ ಹಾಗೂ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಇಬ್ಬರು ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮ ಪಂಚಾಯಿತಿ ಉದ್ಘಾಟನೆ ಸಮಾರಂಭಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಟೇಪ್ ಕಟ್ ಮಾಡಲು ನಾ ಮುಂದು ತಾ ಮುಂದು ಅಂತಾ ಇಬ್ಬರ ನಡುವೆ ಕಿತ್ತಾಟ ನಡೆದಿದೆ.
ಉದ್ಘಾಟನೆಗೆ ತಂದಿದ್ದ ಕತ್ತರಿಯನ್ನ ಶಾಸಕ ಶರತ್ ಎತ್ತಿಕೊಂಡು ಕಟ್ ಮಾಡಲು ಮುಂದಾದಾಗ ಎಂಟಿಬಿ ಗರಂ ಆದರು. ತಲೆಕೆಡಿಸಿಕೊಳ್ಳದೇ ಟೇಪ್ ಕಟ್ ಮಾಡಿದ ಶಾಸಕ ಶರತ್ ಒಳಗೆ ಹೋಗುತ್ತಿದ್ದಂತೆ, "ಬಚ್ಚೇಗೌಡ ನಿಂದು ಇದೇ ಆಗೋಯ್ತು" ಅಂತಾ ಎಂಟಿಬಿ ಆಕ್ರೋಶ ವ್ಯಕ್ತಪಡಿಸಿದರು.
ಆಗ ಶರತ್-ಎಂಟಿಬಿ ನಡುವೆ ವಾಗ್ವಾದ ಆರಂಭವಾಯಿತು. ನಂತರ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿ ಗಲಾಟೆಯನ್ನ ಪೊಲೀಸರು ಮಧ್ಯ ಪವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಕಾಂಗ್ರೆಸ್ (Congress) ಪಕ್ಷದಿಂದ ವಲಸೆಬಂದ ಎಂಟಿಬಿ ನಾಗರಾಜ್ ಹೊಸಕೋಟೆ ಕ್ಷೇತ್ರದಿಂದ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ವಿರುದ್ಧ ಪರಾಜಯ ಹೊಂದಿದ್ದರು.
ಇದನ್ನೂ ಓದಿ: ನಿರುದ್ಯೋಗ, ಸಾಲದ ಸಮಸ್ಯೆ: 2018-20ರಲ್ಲಿ ಎಷ್ಟು ಭಾರತೀಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಾ..?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.