ಮಂಗಳೂರು: ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯರ ನಡುವೆ ಬೀದಿಕಾಳಗ(Student's Fight) ನಡೆದಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಮಧ್ಯೆ ನಿನ್ನೆ(ಏ.4) ಸಂಜೆ ಕೆಫೆಯೊಂದರಲ್ಲಿ ಮಾರಾಮಾರಿ ನಡೆದಿದೆ.


COMMERCIAL BREAK
SCROLL TO CONTINUE READING

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಎನ್ ಕೆಫೆ ಹೊಟೇಲ್ ನಲ್ಲಿ ಈ ಘಟನೆ ನಡೆದಿದ್ದು, ಕಾಲೇಜು ವಿದ್ಯಾರ್ಥಿನಿಯರ ಸ್ಟ್ರೀಟ್ ಫೈಟ್ ವಿಡಿಯೋ ಸೋಷಿಯಲ್ ಮೀಡಿಯಾ(Social Media)ದಲ್ಲಿ ಸಖತ್ ವೈರಲ್ ಆಗುತ್ತಿದೆ.


ಇದನ್ನೂ ಓದಿ: #LuckyDipCMHDK ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಮಾತ್ರ ಅವಕಾಶ: ಬಿಜೆಪಿ


ಬಾವುಟಗುಡ್ಡೆಯಲ್ಲಿರುವ ಖಾಸಗಿ ಕಾಲೇಜಿನ(Mangaluru Private College) ಪದವಿ ವಿದ್ಯಾರ್ಥಿನಿಯರು ಸೋಮವಾರ ಸಂಜೆ ಹೋಟೆಲ್ ಮುಂಭಾಗದಲ್ಲಿ ಜಗಳವಾಡಿಕೊಂಡಿದ್ದಾರೆ. ಯುವಕರ ಜೊತೆಯಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕುಳಿತುಕೊಂಡಿದ್ದಳು. ಈ ವೇಳೆ ಸ್ಥಳಕ್ಕೆ ಬಂದ ಯುವತಿಯೊಬ್ಬಳು ಆ ವಿದ್ಯಾರ್ಥಿನಿ ಮೇಲೆ ಇದ್ದಕ್ಕಿದ್ದಂತೆ ಹಲ್ಲೆ ಮಾಡಿದ್ದಾಳೆ.


ಬಳಿಕ ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಯುವತಿಯರ ಗಲಾಟೆ(College Fight) ಬಿಡಿಸಲು ಯುವಕರು ಹೈರಾಣಾಗಿ ಹೋಗಿದ್ದಾರೆ. ವಿದ್ಯಾರ್ಥಿನಿಯರ ನಡುವಿನ ವೈಷಮ್ಯಕ್ಕೆ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ಪೊಲೀಸ್ ದೂರು ಸಹ ದಾಖಲಾಗಿಲ್ಲ. ಪೂರ್ವ ಪೊಲೀಸ್ ಠಾಣಾ ಪೊಲೀಸರು ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ನಿಷೇಧಿತ ಸಮಯದಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಸಿದ್ರೆ ಕಾನೂನು ಕ್ರಮ: ಕಮಲ್‌ ಪಂತ್



ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - 
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.