ಬೆಂಗಳೂರು: ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. "ಜನಸಾಮಾನ್ಯರ ಹಣ ಲೂಟಿ ಮಾಡಿದ ಕಾಂಗ್ರೆಸ್ ತೊಲಗಿಸಲು ಮೈಸೂರು ಚಲೋ" ಹಮ್ಮಿಕೊಂಡಿರುವ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ʼಭ್ರಷ್ಟ ಕಾಂಗ್ರೆಸ್ ಹಗರಣಗಳ ಸರ್ಕಾರದ ವಿರುದ್ಧದ ʼಮೈಸೂರು ಚಲೋ ಪಾದಯಾತ್ರೆʼಯು ಸತತ 5 ದಿನಗಳು ನಮ್ಮ ತಪಸ್ವೀ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕುತ್ತಾ ಬುಧವಾರ ಮದ್ದೂರು ತಾಲೂಕಿನ ತೂಬಿನಕೆರೆಯಲ್ಲಿ ಇಂದಿನ ಪಾದಯಾತ್ರೆ ಅಂತ್ಯಗೊಂಡಿತು. ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಹಾಗೂ ಭ್ರಷ್ಟ ಮುಖ್ಯಮಂತ್ರಿಗಳ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಜನಬೆಂಬಲ ದೊಂದಿಗೆ ಮುಂದುವರಿಯಲಿದೆʼ ಎಂದು ಹೇಳಿದ್ದಾರೆ. 


ಇದನ್ನೂ ಓದಿ: ಜನಾಂದೋಲನ ಬಳಿಕ ಅಭಿಮಾನಿಗಳಿಂದ ಸಿಎಂ ಪರ ಪ್ರತಿಭಟನೆ


ಸಿ.ಬಿ.ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖರು, ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


ಇದನ್ನೂ ಓದಿ: ಮೂಡಾ ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಮಾತು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.