ರಾಜ್ಯದ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ: ಬಸವರಾಜ ಬೊಮ್ಮಾಯಿ

 ಎರಡೂ ರಾಜ್ಯಗಳ ಮಧ್ಯೆ  ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಆಗ್ರಹಿಸಿದ್ದಾರೆ. 

Written by - Ranjitha R K | Last Updated : Nov 25, 2022, 01:37 PM IST
  • ನ್ಯಾಯ ನಮ್ಮ ಕಡೆಯಿದೆ ಎಂದ ಸಿಎಂ
  • ರಾಜ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮಹಾರಾಷ್ಟ್ರ ಕ್ರಮ ವಹಿಸಬೇಕು
  • ಕಾನೂನು ಹೋರಾಟಕ್ಕೆ ನಮ್ಮ ಆದ್ಯತೆ ಎಂದ ಮುಖ್ಯಮಂತ್ರಿ
ರಾಜ್ಯದ ಗಡಿ ಹಾಗೂ ಜನರನ್ನು ರಕ್ಷಿಸಲು  ಶಕ್ತಿ ಮೀರಿ ಹೋರಾಟ:  ಬಸವರಾಜ ಬೊಮ್ಮಾಯಿ title=
CM Basavaraja Bommai

ಬೆಂಗಳೂರು : ನಮ್ಮ ಗಡಿ ಹಾಗೂ ಜನರನ್ನು ರಕ್ಷಿಸಲು  ಶಕ್ತಿ ಮೀರಿ ಹೋರಾಟ  ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನ್ಯಾಯ ನಮ್ಮ ಕಡೆಯಿದೆ. ಎರಡೂ ರಾಜ್ಯಗಳ ಮಧ್ಯೆ  ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಆಗ್ರಹಿಸಿದ್ದಾರೆ. 

ರಾಜ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮಹಾರಾಷ್ಟ್ರ ಕ್ರಮ ವಹಿಸಬೇಕು :
ಭಾರತ ರಾಜ್ಯಗಳ ಒಕ್ಕೂಟ. ಪ್ರತಿ ರಾಜ್ಯಕ್ಕೂ ತನ್ನದೇ  ಆದ ಹಕ್ಕುಗಳಿವೆ. ರಾಜ್ಯಗಳನ್ನು  ರಾಜ್ಯ ಮರುವಿಂಗಡನಾ ಕಾಯ್ದೆಯಡಿ ರಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು  ಆಯಾ ರಾಜ್ಯಗಳ ಕರ್ತವ್ಯವಾಗಿದ್ದು, ರಾಜ್ಯಗಳ ನಡುವೆ ಶಾಂತಿ ಕಾಯ್ದುಕೊಳ್ಳಬೇಕಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರ ತಕ್ಷಣವೇ ಕ್ರಮಕೈಗೊಂಡು ರಾಜ್ಯಗಳ ನಡುವಿನ ಅಂತರವನ್ನು ಕಡಿಮೆಮಾಡಬೇಕು ಎಂದು ಸಿಎಂ ಹೇಳಿದ್ದಾರೆ. ನಾವು ಕಾನೂನು ಪಾಲಿಸುವವರಾಗಿದ್ದು, ನಮ್ಮ ಹಕ್ಕುಗಳ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ. ಮಹಾರಾಷ್ಟ್ರ 2004 ರಲ್ಲಿ ಪ್ರಕರಣ ದಾಖಲಿಸಿತ್ತು.  ನಾವು ನ್ಯಾಯಾಲಯದಲ್ಲಿ ಹೋರಾಡುತ್ತಿದ್ದೇವೆ ಎಂದರು.   

ಇದನ್ನೂ ಓದಿ : ನಿಷೇಧಿತ ಪ್ಲಾಸ್ಟಿಕ್ ಗೋದಾಮಿಗೆ ದಾಳಿ ನಡೆಸಿ ದಂಡ ವಿಧಿಸಿದ ಬಿಬಿಎಂಪಿ

ಕಾನೂನು ಹೋರಾಟಕ್ಕೆ ಆದ್ಯತೆ :
ನಮ್ಮ ಮೊದಲ ಆದ್ಯತೆ ಕಾನೂನಾತ್ಮಕ ಹೋರಾಟ ಮಾಡುವುದಾಗಿದೆ.  ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿದ್ದಾಗ ಅದರ ತೀರ್ಪಿಗಾಗಿ ಕಾಯಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.  ಪ್ರಕರಣವು ಅದರ ಅರ್ಜಿಯ ಅರ್ಹತೆಯ ಮೇಲೆ ನಿಂತಿಲ್ಲ, ಬದಲಾಗಿ ಮೆಂಟೇನಬಿಲಿಟಿ ಆಧಾರದ ಮೇಲೆ ನಿಂತಿದೆ. ಕಲಂ 3 ಕೂಡ ಬಹಳ ಸ್ಪಷ್ಟವಾಗಿದೆ. ಸರ್ವೋಚ್ಚ ನ್ಯಾಯಾಲಯವು ಈ ಬಗ್ಗೆ ಒಂದು ನಿರ್ಣಯಕ್ಕೆ  ಬರಬೇಕಿದೆ ಎಂದರು. ಮುಂದಿನ ವಾರದಲ್ಲಿ ಸರ್ವ ಪಕ್ಷ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

ಇದನ್ನೂ ಓದಿ : “ಯಾರೇ ಆಗಿದ್ರೂ ಒಬ್ಬರಿಗೆ ಒಂದೇ ಟಿಕೆಟ್”: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸ್ಪಷ್ಟನೆ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News