Loksabha Election 2024: ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ರ‍್ಯಾಂಡಮೈಸೇಷನ್

(Final Randomization of Polling Persons: ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಇವರ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿವೆ. 

Written by - Bhavya Sunil Bangera | Last Updated : Apr 24, 2024, 01:13 PM IST
  • ಸಾರ್ವತ್ರಿಕ ಲೋಕಸಭಾ ಚುನಾವಣೆ 2024
  • ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ರ‍್ಯಾಂಡಮೈಸೇಷನ್
  • ಮತಗಟ್ಟೆ ಅಧಿಕಾರಿಗಳಿಗೆ ಎರಡು ಬಾರಿ ತರಬೇತಿ
Loksabha Election 2024: ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ರ‍್ಯಾಂಡಮೈಸೇಷನ್ title=

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ(Final Randomization of Polling Persons) ರ‍್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಸಾಮಾನ್ಯ ವೀಕ್ಷಕರುಗಳ ಸಮ್ಮುಖದಲ್ಲಿ ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆಸಿದರು.

ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಇವರ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿವೆ. ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ. 

ಅದರಂತೆ, 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 43123 ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಜೊತೆಗೆ 305 ವಲ್ನರಬಲ್ ಹಾಗೂ ಕ್ರಿಟಿಕಲ್ ಮತಗಟ್ಟೆಗಳಿಗಾಗಿ  385 ಮೈಕ್ರೋ ಅಬ್ಸರ್ವರ್ಸ್ ಗಳನ್ನು ನಿಯೋಜನೆ ಮಾಡಲಾಗಿದ್ದು, ಅವರನ್ನು ಕೂಡಾ ರ‍್ಯಾಂಡಮೈಸೇಷನ್ ಮಾಡಲಾಯಿತು.

ಮತಗಟ್ಟೆ ಅಧಿಕಾರಿಗಳಿಗೆ ಎರಡು ಬಾರಿ ತರಬೇತಿ:

ಲೋಕಸಭಾ ಚುನಾವಣೆಗೆ ನಿಯೋಜಿಸಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆ ಕುರಿತು ಎರಡು ಬಾರಿ ತರಬೇತಿಯನ್ನು ನೀಡಲಾಗಿದೆ. 

ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಕಾಡುಗೊಲ್ಲ ಸಮುದಾಯ ST ಗೆ ಸೇರ್ಪಡೆ-ಪ್ರಿಯಾಂಕಾ ಗಾಂಧಿ ಭರವಸೆ 

ಮಸ್ಟರಿಂಗ್ ಸೆಂಟರ್ ಗಳಿಂದ ಮತದಾನ ಸಾಮಗ್ರಿಗಳ ಸಂಗ್ರಹ:

ನಗರದಲ್ಲಿರುವ ಎಲ್ಲಾ 8984 ಮತಗಟ್ಟೆಗಳಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಈ ಸಂಬಂಧ ದಿನಾಂಕ: 25-04-2024 ರಂದು ಎಲ್ಲಾ ಸಿಬ್ಬಂದಿಗಳು ಬೆಳಗ್ಗೆ 9.30ಕ್ಕೆ ಮಸ್ಟರಿಂಗ್ ಕೇಂದ್ರಗಳಿಗೆ ತೆರಳಿ ಮತಗಟ್ಟೆಗಳ ಸಾಮಗ್ರಿಗಳನ್ನು ಸಂಗ್ರಹಿಸಿಕೊಂಡು ಆಯಾ ಚುನಾವಣಾಧಿಕಾರಿಗಳು ವ್ಯವಸ್ಥೆ ಮಾಡಿರುವ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಲಿದ್ದಾರೆ.

ಈ ವೇಳೆ ಸಾಮಾನ್ಯ ವೀಕ್ಷಕರುಗಳಾದ ಗಾಯತ್ರಿ ರಾಥೋರ್, ವಾಣಿ ಮೋಹನ್, ಮಕರಂದ್ ಪಾಂಡುರಂಗ, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ಕೆ.ಎ ದಯಾನಂದ್, ವಿನೋತ್ ಪ್ರಿಯಾ, ಸ್ನೆಹಲ್, ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ್, ಜಿಲ್ಲಾ ಮಟ್ಟದ ಮಾನವ ಸಂಪನ್ಮೂಲ ನೋಡಲ್ ಅಧಿಕಾರಿಯಾದ ಡಿ.ಆರ್ ಅಶೋಕ್, ಎನ್.ಐ.ಸಿ ಸಿಬ್ಬಂದಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ನೇಹಾ ಪ್ರಕರಣ : ರಾಜಕೀಯ ನಷ್ಟ ತುಂಬಿಕೊಳ್ಳಲು ಸಿಎಂ ಸಾಂತ್ವನದ ಡ್ರಾಮಾ-ಪ್ರಹ್ಲಾದ್ ಜೋಶಿ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News