ನವದೆಹಲಿ: ಕರ್ನಾಟಕ ರಾಜ್ಯ ವಿಧಾನಸಭೆಗ ಚುನಾವಣೆಗೆ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಮಹೂರ್ತವನ್ನು ಅಂತಿಮಗೊಳಿಸಿದೆ. 


COMMERCIAL BREAK
SCROLL TO CONTINUE READING

ದೆಹಲಿಗೆ ಕಾಂಗ್ರೆಸ್ ಅಧಿವೇಶನದಲ್ಲಿ ಭಾಗವಹಿಸಲು ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹದ್ದೊಂದು ಸುಳಿವು ನೀಡಿದ್ದಾರೆ. ಇದೆ ತಿಂಗಳ ದೆಹಲಿಯಲ್ಲಿ ನಡೆಯುವ ಸ್ಕ್ರಿನಿಂಗ್ ಕಮಿಟಿ ಸಭೆಯ ನಂತರ ಬಹುತೇಕವಾಗಿ 224 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಲಾಗಿದೆ. ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಪಟ್ಟಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಮಾಡಲಾಗುವುದು ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.


ಈ ಕುರಿತಾಗಿ ದೆಹಲಿಯಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ "ಕ್ಷೇತ್ರದ ಮತದಾರರು ಬಯಸುವ ಅಭ್ಯರ್ಥಿಗಳಿಗೆ  ಮಾತ್ರ ಪಕ್ಷದ ಟಿಕೆಟ್ ನೀಡಲಾಗುವುದು, ಒಂದುವೇಳೆ ಮಂತ್ರಿಗಳ ಮಕ್ಕಳಿಗೂ ಗೆಲ್ಲುವ ಸಾಮರ್ಥ್ಯವಿದ್ದರೆ ಮಾತ್ರ ಅವರಿಗೆ ಟಿಕೆಟ್ ನೀಡುತ್ತೇವೆ" ಎಂದು ಸ್ಪಷ್ಟಪಡಿಸಿದರು. ಇದೆ ವೇಳೆ ಬೇರೆ ಕಡೆಯಿಂದ  ಕಾಂಗ್ರೆಸ್ ಗೆ ವಲಸೆ ಬಂದ ಎಲ್ಲರಿಗೂ ಟಿಕೆಟ್ ನೀಡುವುದಿಲ್ಲವೆಂದು ಸಿದ್ದರಾಮಯ್ಯ ತಿಳಿಸಿದರು