Channapatna Assembly By-Election 2024: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಚುನಾವಣಾ ಅಖಾಡವು ರಂಗೇರಿದಂತಾಗಿದೆ. ಬಿಜೆಪಿ ವಿಧಾನಪರಿಷತ್‌ ಸದಸ್ಯರಾದ ಸಿ.ಪಿ.ಯೋಗೇಶ್ವರ್‌ ಅವರು ತಮ್ಮ ಪರಿಷತ್‌ ಸ್ಥಾನಕ್ಕೆ ಕೊನೆಗೂ ರಾಜೀನಾಮೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಯವರ ಗೃಹ ಕಚೇರಿಗೆ ಸೋಮವಾರ(ಅ.೨೧) ಸಂಜೆ ಆಗಮಿಸಿದ ಸಿ.ಪಿ.ಯೋಗೇಶ್ವರ್‌ ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು. ಅವರ ರಾಜೀನಾಮೆಯನ್ನು ಸಭಾಪತಿಗಳು ಅಂಗೀಕಾರ ಮಾಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಯೋಗೇಶ್ವರ್‌, ʼನಾನು ಪಕ್ಷೇತರನಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ: ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಮಳೆಯ ಆರ್ಭಟ


ʼನಾನು ಸ್ವಂತ ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಉಪಚುನಾವಣೆಯ ಸ್ಪರ್ಧೆಯಲ್ಲಿ ನಾನು ಉತ್ಸುಕನಾಗಿದ್ದೇನೆ. ನಾನು ಯಾರ ಸಂಪರ್ಕ ಮಾಡಿಲ್ಲ, ಆದರೆ ನಾಳೆ ಏನು ಆಗುತ್ತದೆ ಅಂತಾ ಹೇಳಲು ಆಗಲ್ಲ. ಹೀಗಾಗಿ ಹೈಕಮಾಂಡ್ ನನಗೆ ಒಂದು ಅವಕಾಶ ನೀಡಬೇಕು. ಇಲ್ಲಿವರೆಗೂ ಯಾರ ಜೊತೆಗೂ ನಾನು ಸಂಪರ್ಕ ಮಾಡಿಲ್ಲ. ನನಗೆ ಬಿಜೆಪಿ ನಾಯಕರು ಅವಕಾಶ ನೀಡಬೇಕು. ನಮ್ಮ ಪಕ್ಷ ನಾಯಕರು ನನ್ನ ಜೊತೆಗಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿಯವರು ಒಪ್ಪಿಗೆ ಸೂಚನೆ ನೀಡಿಲ್ಲ. ಹೀಗಾಗಿ ನಾನು ಈ ನಿರ್ಧಾರಕ್ಕೆ ಬಂದಿರುವೆʼ ಎಂದಿದ್ದಾರೆ.


ಇನ್ನೂ ಕಾಂಗ್ರೆಸ್ ಸೇರುವ ಬಗ್ಗೆ ನಾನು ಚಿಂತನೆ ಮಾಡಿಲ್ಲ. ನನಗೆ NDA ಅಭ್ಯರ್ಥಿ ಆಗುವ ಆಸೆಯಿದೆ. ಯಾವುದೇ ರೀತಿಯ ವೈಯಕ್ತಿಕ ಭಿನ್ನಾಭಿಪ್ರಾಯ ಇಲ್ಲ. ಜೆಡಿಎಸ್ ಕಾರ್ಯಕರ್ತರು ಒಪ್ಪುತ್ತಿಲ್ಲ. ಜೆಡಿಎಸ್ ಚಿನ್ನೆಯಿಂದ ಸ್ಪರ್ಧೆ ಮಾಡಲು ಯಾವುದೇ ಸಮಸ್ಯೆ ಇಲ್ಲ. ಆದರೆ ಇನ್ನೂ ಅವಕಾಶಯಿದೆ. ಜೆಡಿಎಸ್ ಕಾರ್ಯಕರ್ತರು ವಿರೋಧ ಮಾಡಿದ್ದಾರೆ ಎಂದು ಯೋಗೇಶ್ವರ್‌ ಹೇಳಿದ್ದಾರೆ.


ಇದನ್ನೂ ಓದಿ: ಪ್ರವಾಹ ಹಾನಿ ಸಂಬಂಧ ಸಭೆ ನಡೆಸಿ, 5,000 ಕೋಟಿ ಬಿಡುಗಡೆ ಮಾಡಿ: ಆರ್‌.ಅಶೋಕ ಆಗ್ರಹ


NDA ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಂಗಿತ


ರಾಜೀನಾಮೆ ನೀಡಿದ ಬಳಿಕ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದೇನೆ ಎಂದು ಯೋಗೇಶ್ವರ್‌ ತಿಳಿಸಿದ್ದಾರೆ. ಮೂಲಗಳ ಪ್ರಕಾರ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಅಥವಾ NDA ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಂಗಿತವನ್ನು ಯೋಗೇಶ್ವರ್‌ ವ್ಯಕ್ತಪಡಿಸಿದ್ದರು. ಆದರೆ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲು ಒಪ್ಪದ ಜೆಡಿಎಸ್‌, ನಿಖಿಲ್‌ ಕುಮಾರಸ್ವಾಮಿಯನ್ನು ಮತ್ತೊಮ್ಮೆ ಚುನಾವಣಾ ಕಣಕ್ಕಿಳಿಸುವ ಸಾಧ್ಯತೆಯಿದೆ. ಇದೇ ಕಾರಣಕ್ಕೆ ಇದೀಗ ಯೋಗೇಶ್ವರ್‌ ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ ಬೈ ಹೇಳಿದ್ದಾರೆ ಎನ್ನಲಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.