ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ನೇಮಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಲ್ಲಿಸಿದ್ದ ವರದಿಯನ್ನು ರಾಜ್ಯ ಸರ್ಕಾರವು ಅಂಗಿಕರಿಸಿದ್ದು ಇದನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.


COMMERCIAL BREAK
SCROLL TO CONTINUE READING

ಪ್ರತ್ಯೇಕ ಲಿಂಗಾಯತ್ ಧರ್ಮದ ಸ್ಥಾಪನೆಗೆ ಬೇಡಿಕೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕುರಿತಾಗಿ  ಸಮಗ್ರ ಅಧ್ಯಯನ ಮಾಡಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಮೋಹನ್ ನೇತೃತ್ವದ ಸಮಿತಿಗೆ ಕೋರಿತ್ತು, ನಂತರ ಸಮಿತಿಯು ಅಧ್ಯಯನ ಮಾಡಿ  ಪ್ರತ್ಯೇಕ ಲಿಂಗಾಯತ ಧರ್ಮದ ಸ್ಥಾಪನೆ ವಿಚಾರವಾಗಿ ಒಪ್ಪಿಗೆ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇಂದು ಈ ವರದಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಇಂದು ಸಭೆ ಕರೆದು ಕೊನೆಗೂ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒಪ್ಪಿಗೆ ನೀಡಿದೆ.


ಈ ಪ್ರತ್ಯೇಕ ಲಿಂಗಾಯತ ಧರ್ಮದ ವರದಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಜಗದೀಶ್ ಶೆಟ್ಟರ ಈ ವರದಿಯನ್ನು ರಾಜ್ಯ ಸರ್ಕಾರವು ಚುನಾವಣಾ ಹಿನ್ನಲೆಯಲ್ಲಿ  ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಇದರಿಂದ ಯಾರಿಗೂ ಲಾಭವಿಲ್ಲ ಎಂದು ಅವರು ತಿಳಿಸಿದರು.