ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮೈ ಶುಗರ್ಸ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಆರ್ಥಿಕ ಇಲಾಖೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸರ್ಕರೆ ಕಾರ್ಖಾನೆ ಮೈ ಶುಗರ್ಸ್ ಅನ್ನು ಪುನಶ್ಚೇತನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಈ ಹಿಂದೆ ಭರವಸೆ ನೀಡಿದ್ದರು.
ಇದನ್ನೂ ಓದಿ: ಜನ ಅಗತ್ಯ ಜಮೀನು ಕೊಟ್ಟರೆ ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸಿದ್ಧ; ಡಿಸಿಎಂ ಡಿ.ಕೆ.ಶಿ
ಆ ಭರವಸೆಯಂತೆ ರೋಗಗ್ರಸ್ಥವಾಗಿದ್ದ ಕಾರ್ಖಾನೆಯ ಪುನಶ್ಚೇತನಕ್ಕೆ 15 ಕೋಟಿ ರೂ ಹಾಗೂ ಕಾರ್ಖಾನೆಯ ದುಡಿಯುವ ಬಂಡವಾಳಕ್ಕೆ 35 ಕೋಟಿ ರೂ ಬಿಡುಗಡೆಗೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿಗಳು ಕಳೆದ ವಾರ ಅನುಮೋದನೆ ನೀಡಿದ್ದರು. ಆ ಪ್ರಕಾರ ಇಂದು ಆರ್ಥಿಕ ಇಲಾಖೆ 50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ನೇತೃತ್ವದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಶಾಸಕರ ಮತ್ತು ಜನಪ್ರತಿನಿಧಿಗಳ ನಿಯೋಗ ಮೈ ಶುಗರ್ಸ್ ಪುನಶ್ಚೇತನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತ್ತು.
ಇದನ್ನೂ ಓದಿ: CT Ravi: ರಾಜಕೀಯ ಕಾರಣ, ಅಸಹಿಷ್ಣು ಭಾವನೆಯಿಂದ ಪಠ್ಯ ಪರಿಷ್ಕರಣೆ- ಸಿ.ಟಿ.ರವಿ
37 ಸಾವಿರ ಕಬ್ಬು ಬೆಳೆಗಾರ ರೈತರಿಂದ 5 ಲಕ್ಷ ಟನ್ ಕಬ್ಬು ಸರಬರಾಜು ಮಾಡುವ ಒಪ್ಪಂದವಾಗಿತ್ತು. ಈ ಒಪ್ಪಂದದಂತೆ ರೈತರಿಗೆ ಸಕಾಲದಲ್ಲಿ ಹಣ ಒದಗಿಸುವ ಅಗತ್ಯವಿದೆ ಎಂದು ನಿಯೋಗ ಮನವಿ ಮಾಡಿತ್ತು.
ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮತ್ತೊಮ್ಮೆ ನುಡಿದಂತೆ ನಡೆದಿದ್ದು , ಕೊಟ್ಟ ಮಾತಿನಂತೆ ತಕ್ಷಣಕ್ಕೆ 50 ಕೋಟಿ ರೂ ಬಿಡುಗಡೆ ಆಗಿದೆ. ನುಡಿದಂತೆ ನಡೆದ ಮುಖ್ಯಮಂತ್ರಿಗಳಿಗೆ ನಿಯೋಗ ಮತ್ತು ರೈತ ಸಮೂಹ ಅಭಿನಂದನೆ ಸಲ್ಲಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.