ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು-ಕಾಂಗ್ರೆಸ್ ಘೋಷಣೆ
ನಾ ನಾಯಕಿ ಮಹಿಳಾ ಸಮಾವೇಶಕ್ಕೆ ಆಗಮಿಸಿರುವ ಪ್ರಿಯಂಕಾ ಗಾಂಧಿ ರಾಜ್ಯದಲ್ಲಿಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಹೆಸರಿನಲ್ಲಿ ರಾಜ್ಯದ ಪ್ರತಿ ಕುಟುಂಬದ ಮಹಿಳೆಯ ಪ್ರತಿ ತಿಂಗಳು 2 ಸಾವಿರ ರೂ ದಂತೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಬೆಂಗಳೂರು: ನಾ ನಾಯಕಿ ಮಹಿಳಾ ಸಮಾವೇಶಕ್ಕೆ ಆಗಮಿಸಿರುವ ಪ್ರಿಯಂಕಾ ಗಾಂಧಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಹೆಸರಿನಲ್ಲಿ ರಾಜ್ಯದ ಪ್ರತಿ ಕುಟುಂಬದ ಮಹಿಳೆಯ ಪ್ರತಿ ತಿಂಗಳು 2 ಸಾವಿರ ರೂ ದಂತೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ: Miss Universe 2022 : ಯುಸ್‌ನ ಚೆಲುವೆಯ ಮುಡಿಗೆ ಭುವನ ಸುಂದರಿ ಕಿರೀಟ, ಭಾರತದ ದಿವಿತಾ ರೈಗೆ ನಿರಾಸೆ
ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ ಕಾಂಗ್ರೆಸ್, ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರದಿಂದ ರಾಜ್ಯದ ಮಹಿಳೆಯರು ಏನನ್ನು ಬಯಸುತ್ತಾರೆ? ಎಂಬುದನ್ನ ತಿಳಿಯಲು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ರಾಜ್ಯದ ಮಹಿಳೆಯರಿಗೆ ತಮ್ಮ ಭಾವನೆ, ಸಮಸ್ಯೆ, ಸಲಹೆ, ಅಭಿಪ್ರಾಯ ಹಂಚಿಕೊಳ್ಳುವಂತೆ ಕರೆ ನೀಡಿದ್ದರು.
ಈ ಕರೆಗೆ ಸ್ಪಂದಿಸಿ ಸಾಮಾಜಿಕ ಜಾಲತಾಣ, ಇ ಮೇಲ್, ವಾಟ್ಸಪ್ ಹಾಗೂ ಪಕ್ಷದ ಕಚೇರಿಗೆ ಪತ್ರದ ರೂಪದಲ್ಲಿ ಸಾವಿರಾರು ಸಲಹೆಗಳು ಸ್ವೀಕಾರವಾಗಿವೆ. ಇದರಲ್ಲಿ ಬಹುತೇಕ ಮಹಿಳೆಯರು ಬೆಲೆ ಏರಿಕೆ ಸಮಸ್ಯೆಗೆ ಕಾಂಗ್ರೆಸ್ ಪಕ್ಷದಿಂದ ಪರಿಹಾರ ನಿರೀಕ್ಷಿಸುತ್ತಿರುವುದಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಬೆಲೆ ಏರಿಕೆ ಪರಿಣಾಮವಾಗಿ ಮನೆಯಲ್ಲಿ ದುಡಿಯುವವರ ವೇತನ ಸಾಲದೇ ಸಂಕಷ್ಟ ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ : Balakrishna : ʼದೇವ ಬ್ರಾಹ್ಮಣʼರ ಕ್ಷಮೆ ಕೇಳಿದ ತೆಲುಗು ನಟ ಬಾಲಕೃಷ್ಣ..!
ಮಹಿಳೆಯರು ನಮ್ಮ ಮನೆ ಹಾಗೂ ರಾಜ್ಯದ ಶಕ್ತಿ ಮೂಲವಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಹಾಗೂ ಮನೆ ನಿರ್ವಹಣೆಯಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟ ಅತೀವವಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು ₹2,000ರಂತೆ ವರ್ಷಕ್ಕೆ ₹24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ.ಈ ಯೋಜನೆಯು ರಾಜ್ಯದ 1.5 ಕೋಟಿ ಗೃಹಣಿಯರಿಗೆ ನೆರವಾಗಲಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.