ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಪ್ಪಳ ವತಿಯಿಂದ 2021-22 ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ/ನೀಟ್ ವಿಧ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು  2021-22ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್ (CET/NEET) ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತ ವಿಧ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸಿಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ನಿಗಮದ ವೆಬೆಸೈಟ್  https://mdconline.karnataka.gov.in ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಕೆ.ಇ.ಎ ಕೌನ್ಸ್ಲಿಂಗ್ (Last Date of KEA Counselling) ಆಗಿದ್ದು, 2021-22ನೇ ಸಾಲಿನ ಜಾರಿಗೆ ಬಂದಿರುವ ಅರಿವು ಶೈಕ್ಷಣಿಕ ಸಾಲದ ಯೋಜನೆಯನ್ನು ಅನುಷ್ಠಾನಗೊಳಿಸಲು ಅಲ್ಪಸಂಖ್ಯಾತ ಸಮುದಾಯದ ವಿಧ್ಯಾರ್ಥಿಗಳಿಗೆ  ಸಿಇಟಿ/ನೀಟ್ (CET/NEET) ಮುಖಾಂತರ ಎಂ.ಬಿ ಬಿಎಸ್/ ಬಿ.ಡಿ.ಎಸ್/ ಆಯುಶ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ ಬ್ಯಾಚುಲರ ಆಫ್ ಇಂಜಿನೀಯರಿAಗ್/ ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸಗಳಿಗೆ ಆಯ್ಕೆಯಾದ ವಿಧ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲವನ್ನು ಪಡೆಯಲು ಅರ್ಹರು. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ