ವಿಧಾನಸಭಾ ಚುನಾವಣೆಯ ಅಫಿಡವಿಟ್ ನಲ್ಲಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ನೀಡಿದ ಆರೋಪ - ಅರುಣಾ ಲಕ್ಷ್ಮಿ ವಿರುದ್ಧ ಎಫ್ ಐ ಆರ್ :ತನಿಖೆಗೆ ಕೋರ್ಟ್ ಆದೇಶ
Aruna Lakshmi : ಶಾಸಕ ಮತ್ತು ಮಾಜಿ ಸಚಿವ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಚುನಾವಣೆ ವೇಳೆ ಅರುಣಾ ಲಕ್ಷ್ಮೀ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ವಿಧಾನಸಭಾ ಚುನಾವಣೆಯ ಅಫಿಡವಿಟ್ ನಲ್ಲಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ರಂಗರೆಡ್ಡಿ ಎಂಬವರ ದೂರಿನ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ.
ಅರುಣಾ ಲಕ್ಷ್ಮೀ ವಿರುದ್ದ ದೂರು :
ಶಾಸಕ ಮತ್ತು ಮಾಜಿ ಸಚಿವ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ, ಚುನಾವಣೆ ವೇಳೆ ಅರುಣಾ ಲಕ್ಷ್ಮೀ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : Bengaluru Water Crisis: ಅನ್ಯ ಉದ್ದೇಶಕ್ಕೆ ಕುಡಿಯುವ ನೀರಿನ ಬಳಕೆ ನಿಷೇಧ:ನಿಯಮ ಉಲ್ಲಂಘಿಸಿದರೆ ಬೀಳುವುದು ಭಾರೀ ದಂಡ
ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ :
ಅರುಣಾ ಲಕ್ಷ್ಮೀ ತಪ್ಪು ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ರಂಗರೆಡ್ಡಿ ಎಂಬವರು ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದರು. ಈ ದೂರಿನ ಆಧಾರದ ಮೇಲೆ ಇದೀಗ ಅರುಣ ಲಕ್ಷ್ಮೀ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅರುಣಾ ಲಕ್ಷ್ಮೀ ವಿರುದ್ದ ತನಿಖೆಗೆ ಅನುಮತಿ ನೀಡುವಂತೆ ಪೊಲೀಸರು ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ತನಿಖೆಗೆ ಕೋರ್ಟ್ ಆದೇಶ :
ತನಿಖೆಗೆ ಅವಕಾಶ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸಿದೆ. ವಿಚಾರಣೆ ನಂತರ ಕೂಡಲೇ ತನಿಖೆ ಆರಂಭಿಸುವಂತೆ ಆದೇಶ ನೀಡಿದೆ. ಪ್ರಜಾ ಪ್ರತಿನಿಧಿ ಕಾಯ್ದೆ-1951, 1988 ಸೆಕ್ಷನ್ 125 (a) ಅನ್ವಯ ಅರುಣಾ ಲಕ್ಷ್ಮೀ ವಿರುದ್ದ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ : ಯಲಹಂಕ ವಿದ್ಯುತ್ ಸ್ಥಾವರ ಘಟಕ ಸ್ಥಗಿತಕ್ಕೆ ಸ್ಥಳೀಯ ನಿವಾಸಿಗಳಿಂದ ಆಗ್ರಹ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.