ಬೆಂಗಳೂರು:  ಕಾಂಗ್ರೆಸ್​​ ಮೇಕೆದಾಟು (Congress Padayatre) ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ 30 ಮಂದಿ‌ ವಿರುದ್ದ ಎಫ್‌ಐಆರ್ (FIR) ದಾಖಲು ಮಾಡಲಾಗಿದೆ ಎನ್ನಲಾಗಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ (Home minister Araga Gnanendra), ನಮಗೆ ಸಿಕ್ಕ ವರದಿ ಪ್ರಕಾರ 30 ಜನರ ಮೇಲೆ FIR ದಾಖಲಾಗಿದೆ. ಇಂದು ಕೂಡ ಪಾದಯಾತ್ರೆ ನಡೆಯಲಿದೆ. ರಾಮನಗರ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ. ಅದಕ್ಕೆ ಕಾರಣಕರ್ತರು ಯಾರು ಅವರ ವಿರುದ್ಧ ಮೊದಲು, ನಂತರ ಉಳಿದವರ ಮೇಲೆ ಕ್ರಮ ತೆಗೆದುಕೊಳ್ಳಬಹುದು ಎಂದರು.


ದಂಡ ಹಾಕುವ ಪ್ರಕ್ರಿಯೆಯಲ್ಲಿ ಸರ್ಕಾರದ ವಿಳಂಬ ಇಲ್ಲ. ಇವತ್ತು ಅವರು ಮಾಡಬೇಕಾದ್ದು ಪಾದಯಾತ್ರೆ ಅಲ್ಲ. ನೀರಿನಲ್ಲಿ ಕಿವಿ ಹಿಡಿದು ಕೂತು, ಜನರಲ್ಲಿ ದಮ್ಮಯ್ಯ ತಪ್ಪಾಯ್ತು ಅಂತ ಕ್ಷಮೆ ಕೇಳಬೇಕು. ಕೊರೊನಾ ಸಂದರ್ಭದಲ್ಲಿ ಇವರು ಈ ರೀತಿ ಮಾಡಬಾರದಿತ್ತು ಎಂದು ಹೇಳಿದರು.


'ನೀರಿಗಾಗಿ ನಡಿಗೆ' (Walk for Water) ಮೇಕೆದಾಟು ಯೋಜನೆ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದೆ. 


ನಿನ್ನೆ ಬೆಳಗ್ಗೆ ಸ್ವಾಮೀಜಿ, ಮೌಲ್ವಿ ಮತ್ತು ಪಾದ್ರಿಗಳು ಮೂರೂ ಧರ್ಮಗಳ ಧಾರ್ಮಿಕ ಮುಖಂಡರು ಗಿಡಗಳಿಗೆ ನೀರೆರೆಯುವ ಮೂಲಕ ಹಾಗೂ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ  ನೀಡಿದರು. ಕಾಂಗ್ರೆಸ್ ಪಕ್ಷ ಜನವರಿ 9 ರಿಂದ 19 ರ ವರೆಗೆ ಈ ಪಾದಯಾತ್ರೆ ಹಮ್ಮಿಕೊಂಡಿದೆ.


ಪ್ರತಿದಿನ 15 ಕಿಲೋಮೀಟರ್ ವರೆಗೆ ನಡಿಗೆ ಇರಲಿದೆ. ಮಧ್ಯೆ 7 ಕಿಲೋಮೀಟರ್ ಗೆ ವಿಶ್ರಾಂತಿಗೆಂದು ಪಾದಯಾತ್ರೆಗೆ ಬ್ರೇಕ್ ಇರಲಿದೆ. ರಾತ್ರಿ 15 ಕೀಲೋಮೀಟರ್ ಮುಗಿಯುತ್ತಲೇ ಅವತ್ತಿನ ದಿನದ ಪಾದಯಾತ್ರೆ (Congress Mekedatu Padayatre) ಕೊನೆಗೊಳ್ಳಲಿದೆ.


ಇದನ್ನೂ ಓದಿ: ನಾಲ್ಕೇ‌ ಕಿಮೀ ನಡೆದು ಸುಸ್ತಾದರೆ ಹೇಗೆ?: ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.