ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ನಡೆಸಿದ ಆರೋಪದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್‌ ನಾರಾಯಣ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೇ 16ರಂದು ಮಂಡ್ಯ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ಪ್ರಚಾರ ನಡೆಸಿದ್ದರು ಎಂದು ಆರೋಪಿಸಲಾಗಿದೆ. 


COMMERCIAL BREAK
SCROLL TO CONTINUE READING

2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 1860 (U/s-171C, 171F) ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1950,1951,1989 (U/s-123) ಅಡಿ ಪ್ರಕರಣ ದಾಖಲಿಸಲಾಗಿದೆ. ಸಚಿವ ಅಶ್ವತ್ಥ್‌ ನಾರಾಯಣ್‌ ಆರೋಪಿ 1 ಆಗಿದ್ದು, ಇನ್ನುಳಿದಂತೆ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ ಆರೋಪಿ ನಂಬರ್‌ 2 ಆಗಿದ್ದಾರೆ. 


ಇದನ್ನು ಓದಿ: Ananya Pandey: ಪಡ್ಡೆ ಹುಡುಗರ ಮನಗೆದ್ದ ಅನನ್ಯಾ ಪಾಂಡೆ ಫೋಟೋಸ್‌


ಸಚಿವ ಅಶ್ವತ್ಥ್‌ ನಾರಾಯಣ್‌ ಮೇ 16ರಂದು ಮಂಡ್ಯ ಜಿಲ್ಲೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಕಾಲೇಜು ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. 


ಮಂಡ್ಯ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ಸಚಿವರ ವಿರುದ್ಧ  ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.  ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೂರು ಆಧರಿಸಿ ತನಿಖೆ ನಡೆಸಿದಾಗ, ಮೇಲ್ನೋಟಕ್ಕೆ ಪ್ರಚಾರ ನಡೆಸಿರುವುದು ಕಂಡುಬಂದಿದೆ. ಹೀಗಾಗಿ ಕೋರ್ಟ್‌ನಲ್ಲಿ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ. ಬಳಿಕ ಎಫ್‌ಐಆರ್‌ ದಾಖಲಿಸುವಂತೆ ಕೋರ್ಟ್‌ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಪೂರ್ವ ಠಾಣೆ ಅಪರಾಧ ವಿಭಾಗದ ಪಿಎಸ್‌ಐ ಕೆ.ಎನ್. ಕೇಶವಮೂರ್ತಿ ಎಫ್‌ಐಆರ್‌ ದಾಖಲಿಸಿದ್ದಾರೆ.


ಇದನ್ನು ಓದಿ: OMG: ಮಾಲೆ ಹಾಕುವ ಬದಲು ವರನ ಕೊರಳಿಗೆ ಅಪಾಯಕಾರಿ ಹಾವನ್ನು ಹಾಕಿದ ವಧು, ವರ ಮಾಡಿದ್ದೇನು ಗೊತ್ತಾ?


ಅಶ್ವತ್ಥ್‌ ನಾರಾಯಣ್‌ ರಾಜಿನಾಮೆಗೆ ಒತ್ತಾಯ: 
ಈ ಬಗ್ಗೆ ಮಾತನಾಡಿದ ದೂರುದಾರ ಸುಂಡಹಳ್ಳಿ ಮಂಜುನಾಥ್, "ಕಾನೂನು ಎಲ್ಲರಿಗೂ ಒಂದೇ ಎಂದು ನಿರೂಪಿಸಿದೆ. ಚುನಾವಣಾ ಆಯೋಗದ ಕ್ರಮವನ್ನ ಸ್ವಾಗತಿಸುತ್ತೇನೆ. ಅಶ್ವತ್ಥ್‌ ನಾರಾಯಣ್‌ರಿಗೆ ಚುನಾವಣಾ ಪ್ರಚಾರದಿಂದ ನಿಷೇಧ ಹೇರಬೇಕು. ತಕ್ಷಣವೇ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು" ಎಂದು ಒತ್ತಾಯಿಸಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.