ಬೆಂಗಳೂರು ನಗರ ಹೊರವಲಯದ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ಮೂವರ ಸಾವು

Bangalore perfume factory : ಬೆಂಗಳೂರು ನಗರದ ಹೊರವಲಯದ ಕುಂಬಳಗೋಡು ಬಳಿಯ ರಾಮಸಂದ್ರದ ಸಮೀಪದ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಬೆಂಕಿ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರ  

Written by - Zee Kannada News Desk | Last Updated : Feb 18, 2024, 09:26 PM IST
  • ಕುಂಬಳಗೋಡು ಬಳಿಯ ರಾಮಸಂದ್ರದ ಸಮೀಪದ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಬೆಂಕಿ ಸಂಭವಿಸಿದೆ
  • ಸ್ಥಳಕ್ಕೆ ರಾಮನಗರದ ಎಸ್​​​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ.
  • ಚಿಕ್ಕಬಸ್ತಿ ಮೂಲದ ವಿಠಲ್ ಎಂಬವರು ಕಾರ್ಖಾನೆ ಮಾಲೀಕರಾಗಿದ್ದಾರೆ.
ಬೆಂಗಳೂರು ನಗರ ಹೊರವಲಯದ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ :  ಮೂವರ ಸಾವು title=

Bangalore perfume factory fire accident : ಬೆಂಗಳೂರು ನಗರದ ಹೊರವಲಯದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.  ಕುಂಬಳಗೋಡು ಬಳಿಯ ರಾಮಸಂದ್ರದ ಸಮೀಪದ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. 

ಸಂಜೆ ನಾಲ್ಕು ಗಂಟೆಗೆ ಈ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ದಟ್ಟ ಹೊಗೆ ಆವರಿಸಿದೆ, ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. 

ಇದನ್ನು ಓದಿ :Chaitra J Achar : ಕಪ್ಪು ಬಟ್ಟೆಯಲ್ಲಿ ಬೋಲ್ಡ್ ಲುಕ್ : ಹೊಸ ಫೋಟೋಶೂಟ್

ಪರ್ಫ್ಯೂಮ್ ಫಿಲ್ಲಿಂಗ್ ಮಾಡುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮನೆಯೊಂದರಲ್ಲಿ ಪರ್ಫ್ಯೂಮ್ ಕಾರ್ಖಾನೆ ನಡೆಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.  ಒಟ್ಟು ಎಂಟು ಜನರು ಪರ್ಫ್ಯೂಮ್ ಫಿಲ್ಲಿಂಗ್ ಕೆಲಸ ಮಾಡುತ್ತಿದ್ದರು. ನೋಡ ನೋಡುತ್ತಿದ್ದಂತೆ ಬೆಂಕಿ ಆವರಿಸಿಕೊಂಡಿದ್ದು, ಅಲ್ಲಿಂದ ಹೊರಗೆ ಬರಲಾಗದೇ ಸಜೀವ ದಹನವಾಗಿದ್ದಾರೆ.

ಇದನ್ನು ಓದಿ : ‘ಬಾಹುಬಲಿ’ಯಲ್ಲಿ ʼಕಟ್ಟಪ್ಪʼನ ಪಾತ್ರವನ್ನು ಮಿಸ್ ಮಾಡಿಕೊಂಡ ಬಾಲಿವುಡ್ ಹೀರೋ..!

ಚಿಕ್ಕಬಸ್ತಿ ಮೂಲದ ವಿಠಲ್ ಎಂಬವರು ಕಾರ್ಖಾನೆ ಮಾಲೀಕರಾಗಿದ್ದಾರೆ. ಅಲ್ಲಾಬಕ್ಷು, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್ ಎಂಬವರು ಗಾಯಗೊಂಡಿದ್ದು, ಗಾಯಾಳುಗಳನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಒರ್ವ ಸಲೀಂ ಎಂದು ಗೊತ್ತಾಗಿದೆ. ಇನ್ನಿಬ್ಬರ ಹೆಸರು ತಿಳಿದು ಬಂದಿಲ್ಲ.ಮತ್ತು  ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ರಾಮನಗರದ ಎಸ್​​​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್  ಮಾಡಿ. 

Trending News