ಹಾವೇರಿ : ಜಿಲ್ಲೆಯ ಆಲದಕಟ್ಟಿ ಗ್ರಾಮದ ಪಟಾಕಿ ಗೋದಾಮಿನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ಸಜೀವ ದಹನವಾಗಿದ್ದು, ಗೋದಾಮಿನ ಪಕ್ಕದಲ್ಲಿದ್ದ ಮಹಿಳೆ ಸೇರಿದಂತೆ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.


COMMERCIAL BREAK
SCROLL TO CONTINUE READING

ಮೃತರನ್ನು ಕಾಟೇನಹಳ್ಳಿ ಗ್ರಾಮದ 45 ವರ್ಷದ ದ್ಯಾಮಪ್ಪ ಓಲೇಕಾರ, 28 ವರ್ಷದ ರಮೇಶ್ ಬಾರಿಕ್ ಮತ್ತು 28 ವರ್ಷದ ಶಿವಲಿಂಗ ಅಕ್ಕಿ ಎಂದು ಗುರುತಿಸಲಾಗಿದೆ. ದೇಹಗಳು ಸುಟ್ಟು ಕರಕಲಾಗಿದ್ದವು. 


ವೆಲ್ಡಿಂಗ್ ಕೆಲಸಕ್ಕೆ ಬಂದಿದ್ದ ಹರಿಹರ ತಾಲೂಕಿನ ತೆಗ್ಗಿನಕೇರಿಯ 32 ವರ್ಷದ ವಾಸಿಂ ಶಾಫಿ ಅಹಮದ್ ಎಂಬುವವರು ಬೆಂಕಿಯಿಂದ ಪಾರಾಗಲು ಮೊದಲ ಮಹಡಿಯಿಂದ ಕಟ್ಟಡದಿಂದ ಜಿಗಿದಿದ್ದಾರೆ ಎನ್ನಲಾಗಿದೆ. ಈ ವೇಳೆ ಬೆನ್ನು ಮೂಳೆ ಮುರಿದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: "ಸುಪ್ರೀಂ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಸರ್ಕಾರ ಕನ್ನಡಿಗರ ಹಿತ ಬಲಿಕೊಟ್ಟಿದೆ" 


ಇವರೊಂದಿಗೆ ಮತ್ತೋರ್ವ ಕಾರ್ಮಿಕ ಶೇರು ಮಾಳಪ್ಪ ಕಟ್ಟಿಮನಿ ಕೂಡ ಗಾಯಗೊಂಡಿದ್ದು, ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋದಾಮಿನ ಪಕ್ಕದಲ್ಲಿ ವಾಸವಾಗಿರುವ ಕಲಾವತಿ ಕೆ.ಎಸ್. ಎಂಬ ಮಹಿಳೆ ಹೊಗೆಯನ್ನು ಸೇವಿಸಿ ಅಸ್ವಸ್ಥಗೊಂಡಿದ್ದು, ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.


ಕೂಡಲೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಐದು ಅಗ್ನಿಶಾಮಕ ವಾಹನಗಳು ಮತ್ತು 25 ಸಿಬ್ಬಂದಿಗಳನ್ನು ಒಳಗೊಂಡ ಸುಮಾರು ಐದು ಗಂಟೆಗಳ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಂದಿಸಲಾಯಿತು.


ಗೋದಾಮಿನಲ್ಲಿ ಇನ್ನಿಬ್ಬರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ಪತ್ತೆಯಾಗಿಲ್ಲ. ವೆಲ್ಡಿಂಗ್ ಕೆಲಸ ಮಾಡುವಾಗ ಕಿಡಿ ಹೊತ್ತಿಕೊಂಡು ಬೆಂಕಿ ಹೊತ್ತಿರಬಹುದು ಎಂದು ಶಂಕಿಸಲಾಗಿದೆ.


ಇದನ್ನೂ ಓದಿ:  ಸಿದ್ದರಾಮಯ್ಯ ಸರ್ಕಾರಕ್ಕೆ 100 ದಿನ: ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ ಬಿಜೆಪಿ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.