close

News WrapGet Handpicked Stories from our editors directly to your mailbox

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ನಾಲ್ವರೂ ಪ್ರಾಣಾಪಾಯದಿಂದ ಪಾರು

ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿ ಉರಿದ ಘಟನೆ ರಾಮನಗರದ ಬಳಿ ನಡೆದಿದೆ.

Updated: Jul 1, 2018 , 01:23 PM IST
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ನಾಲ್ವರೂ ಪ್ರಾಣಾಪಾಯದಿಂದ ಪಾರು
ಸಾಂದರ್ಭಿಕ ಚಿತ್ರ

ರಾಮನಗರ: ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿ ಉರಿದ ಘಟನೆ ರಾಮನಗರ ತಾಲೂಕಿನ ಮದರ್ ಸಾಬರದೊಡ್ಡಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎನ್ನಲಾಗಿದೆ.

ಬೆಂಗಳೂರು ಮೂಲದ ನಾಲ್ವರು ಭಾನುವಾರ ಬೆಳಿಗ್ಗೆ ಸ್ಕಾರ್ಪಿಯೋ ಕಾರಿನಲ್ಲಿ ರಾಮನಗರದಿಂದ ಮಂಚನಬಲೆ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಮದರ್ ಸಾಬರದೊಡ್ಡಿ ಗ್ರಾಮದ ಬಳಿ ಇಂಜಿನ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕಾರಿನಲ್ಲಿದ್ದವರು ಕೂಡಲೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ನಂತರ ನೋಡನೋಡುತ್ತಿದ್ದಂತೆಯೇ ಬೆಂಕಿ ಇಡೀ ಕಾರನ್ನು ಆವರಿಸಿ ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ರಾಮನಗರ ಗ್ರಾಮಾಂತರ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.