ಮುಂದಿನ ವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ?

ಮಾರ್ಚ್ 30ರೊಳಗೆ ಅಭ್ಯರ್ಥಿಗಳ ಪಟ್ಟಿ ಕಳುಹಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ.  

Last Updated : Mar 26, 2018, 12:08 PM IST
ಮುಂದಿನ ವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ? title=

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಟಿಕೇಟ್ ನದ್ದೇ ಸದ್ದು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಮಾರ್ಚ್ 30ರೊಳಗೆ ಅಭ್ಯರ್ಥಿಗಳ ಪಟ್ಟಿ ಕಳುಹಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದ್ದು, 130 ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಹಾಲಿ ಶಾಸಕರಿಗೆ ಟಿಕೇಟ್ ಅಂತಿಮಗೊಳಿಸುವ ಸಾಧ್ಯತೆಯೂ ಇದೆ.

ಕ್ಷೇತ್ರದ ಮತದಾರರು ಬಯಸುವ ಅಭ್ಯರ್ಥಿಗಳಿಗೆ  ಮಾತ್ರ ಪಕ್ಷದ ಟಿಕೆಟ್ ನೀಡಲಾಗುವುದು, ಒಂದುವೇಳೆ ಮಂತ್ರಿಗಳ ಮಕ್ಕಳಿಗೂ ಗೆಲ್ಲುವ ಸಾಮರ್ಥ್ಯವಿದ್ದರೆ ಮಾತ್ರ ಅವರಿಗೆ ಟಿಕೆಟ್ ಲಭಿಸುವ ಸಾಧ್ಯತೆ ಇದೇ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳುತ್ತಾ ಬಂದಿದ್ದಾರೆ. ಜೊತೆಗೆ ಕಾಂಗ್ರೆಸ್ ಗೆ ವಲಸೆ ಬಂದ ಎಲ್ಲರಿಗೂ ಟಿಕೆಟ್ ನೀಡುವುದಿಲ್ಲವೆಂದು ಸಹ ಸಿಎಂ ಸ್ಪಷ್ಟಪಡಿಸಿದ್ದರು.

Trending News