ಬೆಂಗಳೂರು: ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಮೇ 5 ರಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುವುದೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋ ಲೆ ಹೊರಡಿಸಿದೆ. 


COMMERCIAL BREAK
SCROLL TO CONTINUE READING

ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು‌ಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆಯಲ್ಲಿ ತಿಳಿಸಲಾಗಿದೆ.


ಶುಲ್ಕ ಹೆಚ್ಚಿಸುವಂತಿಲ್ಲ: 


ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭ ದಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು, ಇಚ್ಛಿಸುವ ಪೋಷಕರಿಂದ ಕಂತುಗಳ ಮೂಲಕ ಸ್ವೀಕರಿಸತಕ್ಕದ್ದು ಹಾಗೂ 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ. 


ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ನಿರ್ದಾಕ್ಷಿಣ್ಯವಾದ ಕ್ರಮಕ್ಕೆ ಮುಂದಾಗಲಾಗುವುದೆಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.