ಟೀಚರ್‌ ಹೊಡೆತಕ್ಕೆ ಕಣ್ಣು ಕಳೆದುಕೊಂಡ ಬಾಲಕ; ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ತಂದೆ-ತಾಯಿ ಪ್ರೊಟೆಸ್ಟ್!!‌

ಪೋಷಕರು ತಮ್ಮ ಮಗನಿಗೆ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ವೈದ್ಯರು ಬಾಲಕನ ಕಣ್ಣಿನ ಸೂಕ್ಷ್ಮ ಭಾಗಕ್ಕೆ ಪೆಟ್ಟು ಬಿದ್ದಿದ್ದರಿಂದ ಕಣ್ಣು ಕಾಣುವುದಿಲ್ಲವೆಂದು ಹೇಳಿದ್ದಾರಂತೆ.

Written by - Puttaraj K Alur | Last Updated : Apr 5, 2025, 06:18 PM IST
  • ಸರ್ಕಾರಿ ಟೀಚರ್ ಥಳಿತ ಕಣ್ಣು ಕಳೆದುಕೊಂಡ ಒಂದನೇ ತರಗತಿ ವಿದ್ಯಾರ್ಥಿ
  • ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಕ್ಷೇತ್ರದಲ್ಲಿ ಟೀಚರ್ ದರ್ಪ
  • ಚಿಂತಾಮಣಿ ತಾಲೂಕಿನ ಯಗವಕೋಟೆ ನಲಿಕಲಿ ಶಾಲೆಯಲ್ಲಿ ಘಟನೆ
ಟೀಚರ್‌ ಹೊಡೆತಕ್ಕೆ ಕಣ್ಣು ಕಳೆದುಕೊಂಡ ಬಾಲಕ; ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ತಂದೆ-ತಾಯಿ ಪ್ರೊಟೆಸ್ಟ್!!‌

Chikkaballapur: ಟೀಚರ್‌ ಹೊಡೆತಕ್ಕೆ ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಯಗವಕೋಟೆ ʼನಲಿಕಲಿ ಶಾಲೆʼಯಲ್ಲಿ ನಡೆದಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಕ್ಷೇತ್ರದಲ್ಲಿ ಟೀಚರ್‌ ದರ್ಪ ಮೆರೆದಿದ್ದಾರೆ. 

Add Zee News as a Preferred Source

ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟರಾಜ್-ಅಂಜಲಿ ದಂಪತಿಯ 2ನೇ ಮಗ ಯಶ್ವಂತ್ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಯ ಶಿಕ್ಷಕಿ ಸರಸ್ವತಿ ಎಂಬುವರು ಕೋಲಿನಿಂದ ಬೇರೆ ಬಾಲಕನಿಗೆ ಹೊಡೆಯಲು ಹೋಗಿದ್ದಾರೆ. ಈ ವೇಳೆ ಯಶ್ವಂತ್‌ ಕಣ್ಣಿಗೆ ಕೋಲಿನ ಪೆಟ್ಟು ಬಿದ್ದಿದೆ ಪರಿಣಾಮ ಯಶ್ವಂತ್ ಬಾಲಭಾಗದ ಕಣ್ಣು ಕಳೆದುಕೊಂಡಿದ್ದಾನೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಡೈರಿ ನಿರ್ಮಾಣಕ್ಕೆ ರಾಜಕೀಯ ಜಟಾಪಟಿ

ಮೂರು ಬಾರೀ ಆಪರೇಷನ್ ನಡೆದರೂ ಸಹ ಕಣ್ಣು ಕಾಣದೆ ಪರದಾಟ ಅನುಭವಿಸುತ್ತಿದ್ದಾನೆ. ತಮ್ಮ ಮಗ ಕಣ್ಣು ಕಳೆದುಕೊಂಡ ಹಿನ್ನೆಲೆ ಬಾಲಕನ ತಂದೆ-ತಾಯಿ ನ್ಯಾಯಕ್ಕಾಗಿ ಚಿಂತಾಮಣಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಧರಣಿ ಕೂತಿದ್ದಾರೆ. 

ಪೋಷಕರು ತಮ್ಮ ಮಗನಿಗೆ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ವೈದ್ಯರು ಬಾಲಕನ ಕಣ್ಣಿನ ಸೂಕ್ಷ್ಮ ಭಾಗಕ್ಕೆ ಪೆಟ್ಟು ಬಿದ್ದಿದ್ದರಿಂದ ಕಣ್ಣು ಕಾಣುವುದಿಲ್ಲವೆಂದು ಹೇಳಿದ್ದಾರಂತೆ. ಈ ಹಿನ್ನೆಲೆ ಆತಂಕಗೊಂಡ ಪೋಷಕರು ಶಿಕ್ಷಕಿಯ ವಿರುದ್ಧ ಪೊಲೀಸ್‌ ಠಾಣೆಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದರು. 

ಇದನ್ನೂ ಓದಿ: ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ

ಆದರೆ ಕ್ರಮ ಜರುಗಿಸದ ಕಾರಣ ನ್ಯಾಯಕ್ಕಾಗಿ ಬಾಲಕ ಹಾಗೂ ಆತನ ತಂದೆ-ತಾಯಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂಭಾಗ ಧರಣಿ ಕೂತಿದ್ದಾರೆ. ಬಿಇಓ ಪೊಲೀಸರಿಗೆ ದೂರು ನೀಡಿದರೂ ಅಧಿಕಾರಿಗಳು ದೂರು ದಾಖಲಿಸಿಕೊಂಡಿಲ್ಲವೆಂಬ ಆರೋಪ ಕೇಳಿಬಂದಿದೆ. ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News