ಬೆಂಗಳೂರು: ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಬೆಂಗಳೂರಿನಲ್ಲಿ 9 ತಿಂಗಳು ಮಗು ಸೇರಿದಂತೆ ಒಂದೇ ಕುಟುಂಬದ ಐವರು ಆತ್ಮಹತ್ಯೆ(Family Suicide) ಮಾಡಿಕೊಂಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ತಿಗಳರಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಮೃತರ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ನಾಲ್ವರು ವಯಸ್ಕರು ಮನೆಯ ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದರೆ,  9 ತಿಂಗಳ ಮಗು ಶವವು ಹಾಸಿಗೆಯ ಮೇಲೆ ಪತ್ತೆಯಾಗಿದೆ. ಘಟನೆಯಲ್ಲಿ ಎರಡೂವರೆ ವರ್ಷದ ಬಾಲಕಿಯನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಭಾರತಿ (50), ಸಿಂಚನ(33), ಸಿಂಧುರಾಣಿ (30), ಮಧು ಸಾಗರ(27) ಎಂದು ಗುರುತಿಸಲಾಗಿದೆ. 9 ತಿಂಗಳು ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಈ ಮಗುವಿನ ಸಾವು ಇನ್ನೂ ನಿಗೂಢವಾಗಿದೆ.


ಇದನ್ನೂ ಓದಿ: ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ- ಸಿದ್ಧರಾಮಯ್ಯ


ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. 5 ದಿನಗಳ ಹಿಂದೆಯೇ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಕಳೆದ 5 ದಿನಗಳಿಂದ ಎರಡೂವರೆ ವರ್ಷದ 1 ಮಗು ಮಾತ್ರ ಬದುಕಿತ್ತು. ಆಹಾರವಿಲ್ಲದೆ ನಿತ್ರಾಣವಾಗಿದ್ದ ಮಗುವನ್ನು   ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಪತ್ರಕರ್ತ ಹುಲಗೆರೆ ಶಂಕರ್ ಎಂಬುವರು 4 ದಿನಗಳ ನಂತರ ಮನೆಗೆ ತೆರಳಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಡಿಸಿಪಿ (ಪಶ್ಚಿಮ) ಸಂಜೀವ್ ಎಂ.ಪಾಟೀಲ್ ಹೇಳಿದ್ದಾರೆ. ಮನೆಗೆ ಮರಳಿದ್ದ ಅವರು ಬಾಗಿಲು ಒಳಗಿಂದಲೇ ಲಾಕ್ ಆಗಿರುವುದನ್ನು ಗಮನಿಸಿದ್ದರು. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಬ್ಯಾಡರಹಳ್ಳಿ ಠಾಣೆ ಪೊಲೀಸರು(Byadarahalli Police) ಪರಿಶೀಲನೆ ನಡೆಸಿದ್ದಾರೆ.  


ಇದನ್ನೂ ಓದಿ: Dharwad Buffalo Breed Wins National Recognition : ಧಾರವಾಡದ ಸ್ಥಳೀಯ ಎಮ್ಮೆ ತಳಿಗೆ ರಾಷ್ಟ್ರೀಯ ಮನ್ನಣೆ..!


ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮನೆಯ ಎಲ್ಲಾ ಕಿಟಕಿಗಳು ಮತ್ತು ಬಾಗಿಲನ್ನು ಮುಚ್ಚಲಾಗಿತ್ತು. ಕಳೆದ 3 ದಿನಗಳಿಂದ ಶಂಕರ್ ಅವರು ಮನೆ ಸದಸ್ಯರಿಗೆ ಕರೆ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಮೂರ್ನಾಲ್ಕು ದಿನಗಳ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿದ್ದರಿಂದ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ ಅಂತಾ ಪೊಲೀಸರು ತಿಳಿಸಿದ್ದಾರೆ.


ಆತ್ಮಹತ್ಯೆಗೆ ಶರಣಾದವರು ಏನಾದರೂ ಡೇತ್ ನೋಟ್(Death Note) ಬರೆದಿದ್ದಾರೆಯೇ ಅಥವಾ ಇನ್ನಾವುದಾದರೂ ಪುರಾವೆ ಇದೆಯೇ ಎಂಬುದನ್ನು ಹುಡುಕುತ್ತಿದ್ದಾರೆ. ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆರೆಹೊರೆಯವರಿಗೂ ಗೊತ್ತಾಗಿಲ್ಲ. ಕೌಟುಂಬಿಕ ಕಲಹದಿಂದಲೇ ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಮನೆಯಲ್ಲಿ ಪ್ರತಿದಿನವೂ ಗಲಾಟೆ ಆಗುತ್ತಿತ್ತು ಎಂದು ತಿಳಿದುಬಂದಿದೆ. ಶಂಕರ್ ಪತ್ನಿ ಜೊತೆಗೆ ಓರ್ವ ಮಗ, ಇಬ್ಬರು ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.