ಮೈಸೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ಅನೇಕರಿಗೆ ಉದ್ಯೋಗ ನಷ್ಟವಾಗಿದೆ. ಹಲವರಿಗೆ ಉದ್ಯೋಗ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ 40 ಸಾವಿರ ಸಹಕಾರ ಸಂಘಗಳ ಮೂಲಕ 5 ಸಾವಿರ ಉದ್ಯೋಗವನ್ನು (Job) ಜೂನ್ ಒಳಗೆ ಸೃಷ್ಟಿಸಲು ಸೂಚನೆ ನೀಡಿದ್ದೇನೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ. ಸೋಮಶೇಖರ್ (ST Somashekhar), ಯಾವ ಯಾವ ವಿಭಾಗದಿಂದ ಎಷ್ಟೆಷ್ಟು ಉದ್ಯೋಗವನ್ನು ನೀಡುತ್ತಿದ್ದೇವೆ ಎಂಬ ಮಾಹಿತಿಯನ್ನು ಹಂತ ಹಂತವಾಗಿ ನೀಡುತ್ತೇನೆ ಎಂದು ಕೂಡ ತಿಳಿಸಿದರು.


ಇದೆ ವೇಳೆ ದೇರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಬಿಜೆಪಿಯಲ್ಲಿ ಯ‍ಾವುದೇ ಟೀಂ ಇಲ್ಲ. ಬಾಂಬೆ ಟೀಂ, ಹಳೇ ಟೀಂ, ಹೊಸ ಟೀಂ ಎಂದೆಲ್ಲಾ ಇಲ್ಲ. ನಾವೆಲ್ಲರೂ ಒಂದೇ, ಬಿಜೆಪಿ ಟೀಂ. ಒಂದಿಬ್ಬರು ಮಾತನಾಡಿದರೆ ಇಡೀ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಇದೆ ಎಂದು ಅರ್ಥವಲ್ಲ ಎಂದರು.


ಗುಡ್ ನ್ಯೂಸ್ : ಶೀಘ್ರವೇ ಈ ಇಲಾಖೆಯಲ್ಲಿ ಖಾಲಿ ಇರುವ 16,000 ಹುದ್ದೆಗಳಿಗೆ ನೇಮಕಾತಿ


ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ. ಬಿ.ಎಸ್. ಯಡಿಯೂರಪ್ಪ (BS Yediyurappa) ಅವರೇ ನಮ್ಮ ಮುಖ್ಯಮಂತ್ರಿಗಳು. ನಮಗೆಲ್ಲರಿಗೂ ಟಿಕೆಟ್ ನೀಡಿ ಸಚಿವ ಸ್ಥಾನವನ್ನು ನೀಡುವ ಮೂಲಕ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದವರು. ಅವರು ಎಂದಿಗೂ ಮಾತು ತಪ್ಪಿದವರಲ್ಲ. ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ಸರ್ಕಾರ ಯಾವುದೇ ಸಮಸ್ಯೆ ಇಲ್ಲದೆ ನಡೆಯುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿವೆ ಎಂದು ಹೇಳಿದರು.


ರೋಷನ್ ಬೇಗ್ ಬಿಜೆಪಿ ನಂಬಿ ಬಂದವರಲ್ಲ :
ರೋಷನ್ ಬೇಗ್ ಅವರು ಬಿಜೆಪಿಯನ್ನು ನಂಬಿ ಬಂದವರಲ್ಲ. ಐಎಂಎ (IMA) ಪ್ರಕರಣದಲ್ಲಿ ಅವರನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ. ಅವರು ಏನೂ ತಪ್ಪು ಮಾಡಿಲ್ಲ ಎಂದಾದರೆ ಹೊರಗಡೆ ಬರುತ್ತಾರೆ. ಬೇಗ್ ಕಾಂಗ್ರೆಸ್ ಪಕ್ಷದ ಒಳರಾಜಕೀಯದಿಂದ ಬೇಸತ್ತು ಹೊರಬಂದಿದ್ದಾರೆಯೇ ವಿನಹ ಬಿಜೆಪಿಗೋಸ್ಕರ ಬಂದಿರಲಿಲ್ಲ. ಅವರಿಗೆ ಬಿಜೆಪಿ ಯಾವುದೇ ತರಹದ ಆಶ್ವಾಸನೆ ಕೊಟ್ಟಿರಲಿಲ್ಲ. ಅವರಿಗೆ ಬೇಕಿದ್ದರೆ ಶಿವಾಜಿನಗರದಲ್ಲಿ ಪಕ್ಷ ಟಿಕೆಟ್ ಕೊಡುತ್ತಿತ್ತು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


RITESನಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಪೂರ್ಣ ವಿವರ


ಆರ್ಥಿಕ ಸ್ಪಂದನ ಸದ್ವಿನಿಯೋಗಕ್ಕೆ 4 ವಿಭಾಗಕ್ಕೂ ನೋಡಲ್ ಅಧಿಕಾರಿಗಳ ನೇಮಕ :-
ಆರ್ಥಿಕ ಸ್ಪಂದನ ಕಾರ್ಯಕ್ರಮಗಳ ಮೂಲಕ ರಾಜ್ಯದ ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳ ಮೂಲಕ ಚಾಲನೆ ಕೊಟ್ಟು 39,300 ಕೋಟಿ ರೂಪಾಯಿ ಸಾಲ ನೀಡುತ್ತಿದ್ದೇವೆ. ಅಲ್ಲದೆ ಈ ಯೋಜನೆಯ ಸದ್ವಿನಿಯೋಗವಾಗಬೇಕು, ಪಾರದರ್ಶಕವಾಗಿರಬೇಕು ಎಂಬ ನಿಟ್ಟಿನಲ್ಲಿ ನಾಲ್ಕು ವಿಭಾಗಗಳಿಗೂ ನೋಡಲ್ ಅಧಿಕಾರಿಗಳ ನೇಮಕ ಮಾಡಿದ್ದೇವೆ ಎಂದು ತಿಳಿಸಿದರು.


ಶೀಘ್ರವೇ ರೈತರಿಗೆ 15,300 ಕೋಟಿ ರೂ. ಸಾಲ :-
ರೈತರಿಗೆ (Farmers) ಬೆಳೆ ಸಾಲವಾಗಿ ಪ್ರಸಕ್ತ ಸಾಲಿನಲ್ಲಿ 24.50 ಲಕ್ಷ ರೈತರಿಗೆ ಒಟ್ಟು 15,300 ಕೋಟಿ ರೂ. ಸಾಲ ನೀಡುವ ಗುರಿ ಹಾಕಿಕೊಂಡಿದ್ದು, ಈಗಾಗಲೇ ಇಲ್ಲಿಯವರೆಗೆ 15,22,076 ರೈತರಿಗೆ 9,945.82 ಕೋಟಿ ರೂಪಾಯಿ ಸಾಲವನ್ನು ನೀಡಿದ್ದೇವೆ. ಶೀಘ್ರದಲ್ಲಿ ಗುರಿ ತಲುಪಲಾಗುವುದು ಎಂದು ಸಚಿವರಾದ ಎಸ್ ಟಿ ಎಸ್ ತಿಳಿಸಿದರು.