ತುಂಗಭದ್ರಾ ನದಿಯಲ್ಲಿ ಪ್ರವಾಹ ನಿರೀಕ್ಷೆ:  ಮಳೆ, ಪ್ರವಾಹ ಎದುರಿಸಲು ಸನ್ನದ್ದವಾಗಿರಲು ಅಧಿಕಾರಿಗಳೊಂದಿಗೆ ಸಭೆ

ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹದಿಂದ ಮುಳುಗಡೆಯಾಗುವ ಪ್ರದೇಶದಲ್ಲಿ ಜನ, ಜಾನುವಾರುಗಳ ರಕ್ಷಣೆಗಾಗಿ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಮತ್ತು ತುರ್ತು ಸೇವಾ ಉಪಕರಣಗಳನ್ನು ಸನ್ನದ್ದವಾಗಿಸಲು ಅಣಕು ರಕ್ಷಣಾ ಕಾರ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಕೃತಿ ವಿಕೋಪದಿಂದುಂಟಾಗುವ ಪರಿಸ್ಥಿತಿ ಎದುರಿಸಲು ಸಿದ್ದತೆಗಾಗಿ ಸಭೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

Written by - Manjunath N | Last Updated : Jul 24, 2024, 01:33 AM IST
  • ಮಂಗಳವಾರ ಹೊನ್ನಾಳಿಯ ರಾಜಘಾಟ್ ಬಳಿ ರಕ್ಷಣಾ ಕಾರ್ಯದ ಅಣಕು ಪ್ರದರ್ಶನ ವೀಕ್ಷಣೆ ಮಾಡಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
  • ಜಿಲ್ಲೆಯಲ್ಲಿ 2024 ರ ಜನವರಿಯಿಂದ ಜುಲೈ 23 ರ ವರೆಗೆ 263 ಮಿ.ಮೀ ವಾಡಿಕೆಗೆ 371 ಮಿ.ಮೀ ಮಳೆಯಾಗಿದೆ.
  • ಆದರೆ ಮಲೆನಾಡಿನ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ತುಂಗಾ ನದಿಯಿಂದ ನೀರು ಬರುತ್ತಿದ್ದು ಜುಲೈ 20 ರಂದು 96 ಸಾವಿರ ಕ್ಯೂಸೆಕ್ಸ್ ವರೆಗೆ ನದಿಯ ಮಟ್ಟ ತಲುಪಿತ್ತು.
ತುಂಗಭದ್ರಾ ನದಿಯಲ್ಲಿ ಪ್ರವಾಹ ನಿರೀಕ್ಷೆ:  ಮಳೆ, ಪ್ರವಾಹ ಎದುರಿಸಲು ಸನ್ನದ್ದವಾಗಿರಲು ಅಧಿಕಾರಿಗಳೊಂದಿಗೆ ಸಭೆ title=

ದಾವಣಗೆರೆ: ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹದಿಂದ ಮುಳುಗಡೆಯಾಗುವ ಪ್ರದೇಶದಲ್ಲಿ ಜನ, ಜಾನುವಾರುಗಳ ರಕ್ಷಣೆಗಾಗಿ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಮತ್ತು ತುರ್ತು ಸೇವಾ ಉಪಕರಣಗಳನ್ನು ಸನ್ನದ್ದವಾಗಿಸಲು ಅಣಕು ರಕ್ಷಣಾ ಕಾರ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಕೃತಿ ವಿಕೋಪದಿಂದುಂಟಾಗುವ ಪರಿಸ್ಥಿತಿ ಎದುರಿಸಲು ಸಿದ್ದತೆಗಾಗಿ ಸಭೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಮಂಗಳವಾರ ಹೊನ್ನಾಳಿಯ ರಾಜಘಾಟ್ ಬಳಿ ರಕ್ಷಣಾ ಕಾರ್ಯದ ಅಣಕು ಪ್ರದರ್ಶನ ವೀಕ್ಷಣೆ ಮಾಡಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ 2024 ರ ಜನವರಿಯಿಂದ ಜುಲೈ 23 ರ ವರೆಗೆ 263 ಮಿ.ಮೀ ವಾಡಿಕೆಗೆ 371 ಮಿ.ಮೀ ಮಳೆಯಾಗಿದೆ. ಆದರೆ ಮಲೆನಾಡಿನ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ತುಂಗಾ ನದಿಯಿಂದ ನೀರು ಬರುತ್ತಿದ್ದು ಜುಲೈ 20 ರಂದು 96 ಸಾವಿರ ಕ್ಯೂಸೆಕ್ಸ್ ವರೆಗೆ ನದಿಯ ಮಟ್ಟ ತಲುಪಿತ್ತು.

ಜುಲೈ 23 ರಂದು 33686 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು ಭದ್ರಾ ಜಲಾಶಯದಲ್ಲಿ 168.2 ಅಡಿ ನೀರಿನ ಮಟ್ಟ ಇದ್ದು ಇದು ಭರ್ತಿಯಾಗಲು ಇನ್ನೂ 19.8 ಅಡಿ ನೀರು ಬರಬೇಕಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾಗಬಹುದಾಗಿದ್ದು ಭದ್ರಾ ಜಲಾಶಯ ಭರ್ತಿಯಾದಲ್ಲಿ ನದಿಯಲ್ಲಿ ಹೆಚ್ಚಿನ ನೀರಿನ ಹರಿವು  ಉಂಟಾಗಲಿದೆ. ಇದರಿಂದ ಕೆಲವು ಕಡೆ ಜನರಿಗೆ ಸಮಸ್ಯೆಯಾಗಲಿದೆ ಎಂದರು.ರಾಜ್‌ಘಾಟ್ ಹಾಗೂ ಬಂಬೂ ಬಜಾರ್ ಬಳಿ 28 ಕುಟುಂಬಗಳ 125 ಜನರಿಗೆ ಕಾಳಜಿ ಕೇಂದ್ರವನ್ನು ಅಂಬೇಡ್ಕರ್ ಭವನದಲ್ಲಿ ಪ್ರಾರಂಭಿಸಲು, ಹರಿಹರದ ಗಂಗಾನಗರ ಮತ್ತು ಬೆಂಕಿ ನಗರದಲ್ಲಿ 16 ಕುಟುಂಬಗಳ 64 ಜನರಿಗಾಗಿ ಎಪಿಎಂಸಿ ಭವನದಲ್ಲಿ ಮತ್ತು ತೀವ್ರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ತೊಂದರೆಯಾಗುವ ಗ್ರಾಮಗಳ ಕುಟುಂಬಗಳನ್ನು ಗುರುತಿಸಿ ಮುಂಜಾಗ್ರತೆಯಾಗಿ ಎಲ್ಲೆಲ್ಲಿ ಕಾಳಜಿ ಕೇಂದ್ರಗಳನ್ನು ತಾತ್ಕಾಲಿಕವಾಗಿ ತೆರೆಯಬಹುದೆಂದು ಗುರುತು ಮಾಡಲಾಗಿದೆ ಎಂದರು.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು: ಹೈಕೋರ್ಟ್ ಆದೇಶ

ತುರ್ತು ಪರಿಹಾರ; ಮಳೆಯಿಂದ ಮನೆ ಹಾನಿಯಾದಲ್ಲಿ ಪೂರ್ಣ ಹಾನಿಯಾದರೆ ರೂ.1.20 ಲಕ್ಷ, ಹಾನಿ, ಭಾಗಶಃ ಹಾನಿಯಾದಲ್ಲಿ 6 ಸಾವಿರ ಮತ್ತು 4500 ಮತ್ತು ತುರ್ತು ಪರಿಹಾರವಾಗಿ ರೂ.2500 ಗಳ ಪರಿಹಾರ ನೀಡಲಾಗುತ್ತದೆ. ಇಲ್ಲಿಯವರೆಗೆ 91 ಮನೆಗಳಿಗೆ ಭಾಗಶಃ ಹಾನಿ ಹಾಗೂ 3 ಮನೆಗಳಿಗೆ ಪೂರ್ಣ ಹಾನಿ ಪರಿಹಾರ ವಿತರಣೆ ಮಾಡಲಾಗಿದೆ. ಮಳೆಯಿಂದ ಬೆಳೆಗಳಿಗೆ ಹಾನಿಯಾದಲ್ಲಿ ತಕ್ಷಣವೇ ಕಂದಾಯ ಇಲಾಖೆ ಹಾಗೂ ಕೃಷಿ, ತೋಟಗಾರಿಕೆ ಇಲಾಖೆಗಳಿಂದ ಜಂಟಿ ಸಮೀಕ್ಷೆ ನಡೆಸಿ ನಷ್ಟದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದರು.

ಶಾಲೆ, ಅಂಗನವಾಡಿ ಸೋರುವಿಕೆ ತಡೆಗೆ ಕ್ರಮ; ಮಳೆಯಿಂದ ಶಾಲಾ ಮತ್ತು ಅಂಗನವಾಡಿ ಕೇಂದ್ರಗಳ ಛಾವಣಿ ಸೋರುತ್ತಿದ್ದಲ್ಲಿ ತಾತ್ಕಾಲಿಕವಾಗಿ ಪ್ಲಾಸ್ಟಿಕ್ ಹೊದಿಕೆಯನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಮಳೆ ಬಂದಾಗ ತಾತ್ಕಾಲಿಕವಾಗಿ ಬೇರೆಡೆ ಸ್ಥಳಾಂತರ ಅಥವಾ ತಕ್ಷಣ ದುರಸ್ಥಿಗೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದರು.

ಆರೋಗ್ಯ, ನೈರ್ಮಲ್ಯಕ್ಕೆ ಸೂಚನೆ; ಮಳೆಯಿಂದ ಹೊಸ ನೀರು ಬರಬಹುದು, ಇಂತಹ ಸಂದರ್ಭದಲ್ಲಿ ಶುದ್ದ ಕುಡಿಯುವ ನೀರು ಅಥವಾ ಕಾಯಿಸಿದ ನೀರನ್ನು ಮಾತ್ರ ಬಳಕೆ ಮಾಡಬೇಕು. ಮತ್ತು ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಳೆ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಮತ್ತು ಆರೋಗ್ಯ ಇಲಾಖೆಯಿಂದ ಆಸ್ಪತ್ರೆಗಳಲ್ಲಿ ಔಷಧ ದಾಸ್ತಾನಿಟ್ಟು ಜನರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ತಿಳಿಸಿ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಿAದ ಸ್ವಚ್ಚತೆ ಕಾಪಾಡಲು ಮತ್ತು ಜನರಿಗೆ ಜಾಗೃತಿ ಮೂಡಿಸಲು ತಿಳಿಸಿದರು.ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News