ಧಾರವಾಡ ಕಸೂತಿ ಕಲೆಯಿರುವ ಸೀರೆಯುಟ್ಟು ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆಗಾಗಿ ಇಂದು ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟು  ಬಂದಿರುವುದು ವಿಶೇಷವಾಗಿತ್ತು.

Written by - Yashaswini V | Last Updated : Feb 1, 2023, 05:08 PM IST
  • ಕೇಂದ್ರ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಇಡೀ ದೇಶ, ಜಗತ್ತು ಅವರತ್ತ ದೃಷ್ಟಿ ನೆಟ್ಟಿರುತ್ತದೆ
  • ಈ ಸಂದರ್ಭದಲ್ಲಿ ಅವರು ನಮ್ಮೂರಿನ ಸೀರೆಯಲ್ಲಿ ಬಲಿಷ್ಠ ಭಾರತ ದೇಶದ ಬಜೆಟ್ ಮಂಡಿಸುತ್ತಿರುವುದು ನಮ್ಮ ಜಿಲ್ಲೆ, ರಾಜ್ಯಕ್ಕೆ ಹೆಮ್ಮೆ ಮೂಡಿಸಿದೆ.
  • ಕಸೂತಿ ಅಂತಹ ಗ್ರಾಮೀಣ ಕಲೆಗಳಿಗೆ, ಮಹಿಳೆಯರಿಗೆ ಈ ಮೂಲಕ ಬೆಂಬಲಿಸಿ, ಪ್ರೋತ್ಸಾಹ ನೀಡುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನಮ್ಮ ಕೃತಜ್ಞತೆಗಳು- ಕಸೂತಿ ಕಲೆ ತಜ್ಞೆ ಆರತಿ ಹಿರೇಮಠ
ಧಾರವಾಡ ಕಸೂತಿ ಕಲೆಯಿರುವ ಸೀರೆಯುಟ್ಟು ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  title=
FM Nirmala Sitharaman Saree

Nirmala Sitharaman Saree: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆಗಾಗಿ ಇಂದು ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟು  ಬಂದಿರುವುದು ವಿಶೇಷವಾಗಿತ್ತು. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ನಮ್ಮ ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳಾಮಣಿಗಳು ಈ ಸೀರೆಯನ್ನು ತಯಾರಿಸಿದ್ದಾರೆ.

ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ ಪ್ರಹ್ಲಾದ್ ಜೋಶಿ ಅವರು ನವಲಗುಂದ ಕಸೂತಿ ಕಲೆ ಬಗ್ಗೆ,  ಸಾಂಸ್ಕೃತಿಕ ಶ್ರೀಮಂತಿಕೆ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾರ್ಯಕ್ರಮ ಒಂದರಲ್ಲಿ ವಿವರಿಸಿ, ಈ ಸೀರೆಗಳನ್ನು ಜಿಲ್ಲೆಯ ಉಡುಗೊರೆಯಾಗಿ ನೀಡಿದ್ದಾರೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಸೈಯದ್ ನಯೀಮ್ ಅಹ್ಮದ್ ಅವರ ಮೂಲಕ ಕಸೂತಿ ಪರಿಣಿತರನ್ನು ಗುರುತಿಸಿ, ಕಸೂತಿ ಸೀರೆಯನ್ನು ತಯಾರಿಸಲು ಸೂಚಿಸಿದ್ದರು. 

ಇದನ್ನೂ ಓದಿ- Good News: 7 ಲಕ್ಷ ರೂ.ವರೆಗಿನ ಆದಾಯದವರೆಗೆ ಯಾವುದೇ ತೆರಿಗೆ ಇಲ್ಲ

ಆರತಿ ಕ್ರಾಪ್ಟ್ಸ್:  
ಆರತಿ ಕ್ರಾಪ್ಟ್ಸ್ ಮಾಲೀಕ ಆರತಿ ಹಿರೇಮಠ ಅವರು ಸಂತಸದಿಂದ ಕಸೂತಿ ಕಾರ್ಯ ಆರಂಭಿಸಿದ್ದರು. ಕಳೆದ 32 ವರ್ಷಗಳಿಂದ ಕಸೂತಿ ಕ್ಷೇತ್ರದಲ್ಲಿ ತೊಡಗಿ ಕೊಂಡಿರುವ ಆರತಿ ಅವರು, ಸುಮಾರು 210 ಜನ ಮಹಿಳೆಯರ ತಂಡ ಕಟ್ಟಿ, ಅವರಿಗೆ ಅಗತ್ಯವಿರುವ ಕಸೂತಿ ತರಬೇತಿ ನೀಡಿ, ಸ್ವಯಂ ಉದ್ಯೋಗ ನೀಡಿದ್ದಾರೆ. ಗ್ರಾಹಕರಿಂದ ಕಸೂತಿ ಸಾರಿ, ಶಲ್ಯೆ, ಉಡುಗೆಗಳ ಬೇಡಿಕೆ ಪಡೆಯುವ ಆರತಿ ಹಿರೇಮಠ ಅವರು ಕಸೂತಿ ಮಾಡುವ  ತಮ್ಮ ಮಹಿಳಾ ಸಿಬ್ಬಂದಿ ಮನೆಗೆ ತೆರಳಿ, ಪರಿಕರ ಪೂರೈಸುತ್ತಾರೆ ಮತ್ತು ಸಿದ್ದವಾದ ವಸ್ತುಗಳನ್ನು ತಾವೇ ಕಲೆಕ್ಟ್ ಮಾಡುತ್ತಾರೆ. 

ಕೇಂದ್ರ ಹಣಕಾಸು ಸಚಿವರಿಗೆ ಕಳುಹಿಸಿದ್ದ ಸೀರೆಗಳ ವಿಶೇಷತೆ: 
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮ್ ಅವರ ಆಸಕ್ತಿಯ ಬೇಡಿಕೆಯಂತೆ  ಸೀರೆಗಳನ್ನು ಕಳುಹಿಸಲಾಗಿದ್ದು, ಅದರಲ್ಲಿ ಇಂದು ಅವರು ತೊಟ್ಟಿರುವ ಕೆಂಪು (ಮರೂನ್)  ಬಣ್ಣದ  ಸೀರೆಯು ಸೇರಿದೆ.

ಸೀರೆ ವಿಶೇಷತೆ: ಕೈಮಗ್ಗದಲ್ಲಿ ನೇಯ್ದ ಇಳಕಲ್ಲ ರೇಷ್ಮೆ  ಸೀರೆಗಳಿಗೆ ಸಾಂಪ್ರದಾಯಿಕ ಧಾರವಾಡ ಕಸೂತಿ ಹಾಕಲಾಗಿದೆ. ಐದುವರೇ ಮೀಟರ್ ಉದ್ದದ ಇಳಕಲ್ಲ ಸೀರೆಗೆ ಚಿಕ್ಕಪರಾಸ್ ದಡಿಯಿದ್ದು, ತೇರು, ಗೋಪುರ, ನವಿಲು, ಕಮಲದ ಚಿತ್ರಗಳ ಕಸೂತಿ ಹಾಕಲಾಗಿದೆ.

ಇದನ್ನೂ ಓದಿ- Railway Budget 2023: ರೈಲ್ವೆ ಇಲಾಖೆಗೆ ಅತಿ ದೊಡ್ಡ ಕೊಡುಗೆ! 9 ಪಟ್ಟು ಹೆಚ್ಚು ಅನುದಾನ ! 

ಕೇಂದ್ರ ಬಜೆಟ್ ಮಂಡಿಸುವ ಸಂದರ್ಭದಲ್ಲಿ  ಇಡೀ ದೇಶ, ಜಗತ್ತು ಅವರತ್ತ ದೃಷ್ಟಿ ನೆಟ್ಟಿರುತ್ತದೆ, ಅವರು ನಮ್ಮೂರಿನ ಸೀರೆಯಲ್ಲಿ ಬಲಿಷ್ಠ ಭಾರತ ದೇಶದ ಬಜೆಟ್ ಮಂಡಿಸುತ್ತಿರುವುದು ನಮ್ಮ ಜಿಲ್ಲೆ, ರಾಜ್ಯಕ್ಕೆ ಹೆಮ್ಮೆ ಮೂಡಿಸಿದೆ. ಕಸೂತಿ ಅಂತಹ ಗ್ರಾಮೀಣ ಕಲೆಗಳಿಗೆ, ಮಹಿಳೆಯರಿಗೆ ಈ ಮೂಲಕ ಬೆಂಬಲಿಸಿ, ಪ್ರೋತ್ಸಾಹ ನೀಡುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಸೂತಿ ಕಲೆ ತಜ್ಞೆ ಆರತಿ ಹಿರೇಮಠ ಕೃತಜ್ಞತೆ ಸಲ್ಲಿಸಿದ್ದಾರೆ. ಕೈಮಗ್ಗ ಉದ್ಯಮಕ್ಕೆ  ಪ್ರೋತ್ಸಾಹಿಸುವ ಮತ್ತು  ಸ್ವಯಂ ಉದ್ಯೋಗನಿರತ ಮಹಿಳೆಯರನ್ನು ಬೆನ್ನು ತಟ್ಟುವ ಕೇಂದ್ರ ಸಚಿವರ ಈ ಕ್ರಮ ನಮಗೆ ಸಂತಸ ಮತ್ತು ಹೆಮ್ಮೆ ಮೂಡಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News