ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾತೆ ಬದಲಾವಣೆ: ಜೋಶಿ ಹೆಗಲೇರಿದ 2 ಖಾತೆಗಳು ಯಾವುವು?

Pralhad Joshi: ಮೋದಿ ಸರ್ಕಾರದಲ್ಲಿ ಸತತ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜೊತೆಗೆ ನವೀಕರಿಸಬಹುದಾದ ಇಂಧನ ಖಾತೆಯನ್ನೂ ನೀಡಲಾಗಿದೆ.

Written by - Prashobh Devanahalli | Edited by - Bhavishya Shetty | Last Updated : Jun 10, 2024, 08:47 PM IST
    • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಖಾತೆ ಬದಲಾವಣೆ
    • ಸತತ 5ನೇ ಬಾರಿ ಐತಿಹಾಸಿಕ ಗೆಲುವು ಸಾಧಿಸಿರುವ ಪ್ರಲ್ಹಾದ ಜೋಶಿ
    • ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜೊತೆಗೆ ನವೀಕರಿಸಬಹುದಾದ ಇಂಧನ ಖಾತೆ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾತೆ ಬದಲಾವಣೆ: ಜೋಶಿ ಹೆಗಲೇರಿದ 2 ಖಾತೆಗಳು ಯಾವುವು? title=
Pralhad Joshi

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಖಾತೆ ಬದಲಾವಣೆ ಮಾಡಲಾಗಿದೆ. ಈ ಬಾರಿ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆಯನ್ನು ನೀಡಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಐತಿಹಾಸಿಕ ಗೆಲುವು ಸಾಧಿಸಿರುವ ಪ್ರಲ್ಹಾದ ಜೋಶಿಗೆ ಪ್ರಧಾನಿ ನರೇಂದ್ರ ಮೋದಿ ಹೊಸ ಹೊಣೆಗಾರಿಕೆ ನೀಡಿದ್ದಾರೆ.

ಮೋದಿ ಸರ್ಕಾರದಲ್ಲಿ ಸತತ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜೊತೆಗೆ ನವೀಕರಿಸಬಹುದಾದ ಇಂಧನ ಖಾತೆಯನ್ನೂ ನೀಡಲಾಗಿದೆ.

ಇದನ್ನೂ ಓದಿ: ಮಳೆಗಾಲದಲ್ಲಿ ಕರಾವಳಿಯಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿ: ಸಚಿವ ದಿನೇಶ್

ಪ್ರಧಾನಿ ಮೋದಿ ಅವರ 3ನೇ ಅವಧಿ ಸಂಪುಟದಲ್ಲಿ ಸ್ಥಾನ ಪಡೆದ ಎಲ್ಲರಿಗೂ ಇಂದು ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಲಾಗಿದೆ. ಮೋದಿ ಎರಡನೇ ಅವಧಿಯಲ್ಲಿ ಪ್ರಲ್ಹಾದ ಜೋಶಿ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು, ಗಣಿ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.ಕಲ್ಲಿದ್ದಲು ಖಾತೆಯಲ್ಲಿ ಪ್ರಮುಖ, ಮಹತ್ವದ ಸುಧಾರಣೆ ತಂದು ಸ್ವತಃ ಪ್ರಧಾನಿ ಮೋದಿ ಅವರಿಂದಲೇ ಪ್ರಶಂಸೆಗೆ ಪಾತ್ರರಾಗಿದ್ದರು.

ಸಂಸದೀಯ ಸಚಿವರಾಗಿ ಸಹ ಸದನದಲ್ಲಿ ಎಲ್ಲರೊಂದಿಗೂ ಬೆರೆತು, ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಹು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ಇದೆಲ್ಲವನ್ನೂ ಮನಗಂಡಿರುವ ಪ್ರಧಾನಿ ಮೋದಿ ಈ ಬಾರಿ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ನೀಡಿದ್ದಾರೆ.

ಕಳೆದ ಬಾರಿ ಪ್ರಲ್ಹಾದ ಜೋಶಿ ಕಲ್ಲಿದ್ದಲು ಮತ್ತು ಗಣಿ ಖಾತೆಯಲ್ಲಿ ತಂದ ಪರಿವರ್ತನೆ, ಸಾಧನೆ ಕಂಡು ಪ್ರಧಾನಿ ಮೋದಿ ಈ ಬಾರಿ ಮತ್ತೊಂದು ಖಾತೆ ನವೀಕರಿಸಬಹುದಾದ ಇಂಧನ ಖಾತೆಯ ಹೊಣೆಗಾರಿಕೆಯನ್ನೂ ಜೋಶಿ ಹೆಗಲಿಗೆ ಇರಿಸಿದ್ದಾರೆ.

ಇದನ್ನೂ ಓದಿ: ಯುವ ವಿಚ್ಛೇದನದ ಹಿಂದಿರುವ ಆ ಪ್ರಸಿದ್ಧ ನಟಿ ಬೇರಾರು ಅಲ್ಲ… ಸಪ್ತಮಿ ಗೌಡ!! ನೋಟಿಸ್’ನಲ್ಲಿ ಹೆಸರು ಉಲ್ಲೇಖಿಸಿದ ಶ್ರೀದೇವಿ

ಕೇಂದ್ರದಲ್ಲಿ ಮತ್ತೆ ಸಚಿವ ಸ್ಥಾನ ಕಲ್ಪಿಸಿ ಪ್ರಮುಖ ಖಾತೆಗಳನ್ನು ನಿರ್ವಹಿಸಲು ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರಿಗೆ ಪ್ರಲ್ಹಾದ ಜೋಶಿ ಧನ್ಯವಾದ ಅರ್ಪಿಸಿದ್ದಾರೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News