ಮಂಗಳೂರು: ಮಂಗಳೂರು ನಗರದ ಶಕ್ತಿನಗರದಲ್ಲಿರೋ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ನರ್ಸಿಂಗ್ ಕಾಲೇಜು ಮತ್ತು ಪ್ಯಾರಾಮೆಡಿಕಲ್ ಕಾಲೇಜ್ ಗೆ ಸೇರಿದ ಹಾಸ್ಟೆಲೊಂದರಲ್ಲಿ ವಿಷಾಹಾರ ಸೇವನೆಯಿಂದ 137 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಇವರನ್ನು ಮಂಗಳೂರು ನಗರದ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ಬಳಿಕ ಇದ್ದಕ್ಕಿದ್ದಂತೆ ಕೆಲವು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಆರಂಭವಾಗಿದೆ. ಕೂಡಲೇ, ನಗರದ ವಿವಿಧ ಆಸ್ಪತ್ರೆಗಳಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ- Karnataka Congress : ಕೈ ಟಿಕೇಟ್ ಹಂಚಿಕೆ ವಿಚಾರ : ಕೊನೆಗೂ ಸ್ಕ್ರೀನಿಂಗ್ ಕಮಿಟಿ ರಚಿಸಿದ ಎಐಸಿಸಿ
137 ವಿದ್ಯಾರ್ಥಿಗಳಿಗೆ ಆಸ್ಪತ್ರೆಗಳಲ್ಲಿ ಮುಂದುವರೆದ ಚಿಕಿತ್ಸೆ:
ವಿಷ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳಲ್ಲಿ ಎಜೆ ಹಾಸ್ಪಿಟಲ್ ನಲ್ಲಿ 52, ಕೆಎಂಸಿ ಜ್ಯೋತಿಯಲ್ಲಿ 18, ಯುನಿಟಿ ಆಸ್ಪತ್ರೆಯಲ್ಲಿ 14, ಸಿಟಿ ಆಸ್ಪತ್ರೆಯಲ್ಲಿ 8, ಮಂಗಳಾ ಹಾಸ್ಪಿಟಲ್ ನಲ್ಲಿ 3, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ 42 ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. ಒಟ್ಟು 137 ವಿದ್ಯಾರ್ಥಿಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ವಿದ್ಯಾರ್ಥಿಗಳು ಚಿಕನ್, ಗೀ ರೈಸ್ ತಿಂದಿದ್ದರು ಎನ್ನಲಾಗಿದೆ. ಅಲ್ಲದೇ ಕಳೆದೆರಡು ದಿನದಿಂದ ಕಲುಷಿತ ನೀರು ಮತ್ತು ಆಹಾರ ಸೇವಿಸಿದ ಬಳಿಕ ಆರೋಗ್ಯದ ಸಮಸ್ಯೆ ಕಾಡಿದೆ. ವಿಷಾಹಾರ ಸೇವಿಸಿದ್ದ ಹೆಚ್ಚಿನವರಿಗೆ ಹೊಟ್ಟೆನೋವು, ವಾಂತಿ ಭೇದಿ, ಲೂಸ್‌ಮೋಷನ್ ಶುರುವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆಯ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಕಾಲೇಜಿನ ಆಡಳಿತ ಮಂಡಳಿಯು ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡದ ಕಾರಣ ಇತರ ವಿದ್ಯಾರ್ಥಿನಿಯರು ಮತ್ತು ಪೋಷಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ- ರಸ್ತೆ ಗುಂಡಿ ಮುಚ್ಚಲು 7 ಸಾವಿರ ಕೋಟಿ ಖರ್ಚು ಎಂಬುದು ಸುಳ್ಳು: ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ
ಇನ್ನು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ರಾತ್ರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡು ಎಜೆ ಆಸ್ಪತ್ರೆಗೆ ದಾಖಲಾಗಿರುವ ಸಿಟಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಲು ಶಾಸಕ ವೇದವ್ಯಾಸ್ ಕಾಮತ್ ಅವರು ಆಸ್ಪತ್ರೆಗೆ ಭೇಟಿ ನೀಡಿದರು. ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಶಾಸಕ ಕಾಮತ್ ಸೂಚನೆ ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.