ಮದ್ಯ ಖರೀದಿಗೂ ಕಡ್ಡಾಯವಂತೆ ಆಧಾರ್ ಕಾರ್ಡ್ !
ಮುಂಬರುವ ದಿನಗಳಲ್ಲಿ ಮದ್ಯ ಖರೀದಿಗೂ ಸಹಿತ ಆಧಾರ್ ಕಾರ್ಡ್ ನ್ನು ಕಡ್ಡಾಯಗೊಳಿಸುವ ಕುರಿತಾಗಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಬೆಂಗಳೂರು: ಮುಂಬರುವ ದಿನಗಳಲ್ಲಿ ಮದ್ಯ ಖರೀದಿಗೂ ಸಹಿತ ಆಧಾರ್ ಕಾರ್ಡ್ ನ್ನು ಕಡ್ಡಾಯಗೊಳಿಸುವ ಕುರಿತಾಗಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಮದ್ಯದ ಬಾಟಲ್ ನಿಂದಾಗಿ ಉಂಟಾಗುವ ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಈ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.ಈಗಾಗಲೇ ಆಧಾರ್ ಕಡ್ಡಾಯ ಮಾಡುವ ವಿಚಾರವಾಗಿ ಅಭಿಪ್ರಾಯ ತಿಳಿಸಬೇಕೆಂದು ಅಬಕಾರಿ ಇಲಾಖೆ ಆಯುಕ್ತರಿಗೆ ಇಲಾಖೆ ಕಾರ್ಯದರ್ಶಿಗಳು ಪತ್ರ ಬರೆದಿರುವ ಮಾಹಿತಿ ಬೆಳಕಿಗೆ ಬಂದಿದೆ.
ಮದ್ಯದ ಬಾಟಲಿಯಿಂದಾಗಿ ಪರಿಸರದ ಮಾಲಿನ್ಯದ ಮೇಲೆ ಉಂಟಾಗುವ ಪರಿಣಾಮದ ಕುರಿತಾಗಿ ಮಂಗಳೂರು ಮೂಲದ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈ ಮನವಿಯಲ್ಲಿ ಮದ್ಯ ಖರೀಧಿಗೆ ಆಧಾರ್ ಕಾರ್ಡ್ ಹೊಂದಿರಬೇಕು ಎನ್ನುವುದು ಪ್ರಮುಖ ಸಲಹೆಗಳಲ್ಲಿ ಒಂದು ಎನ್ನಲಾಗಿದೆ.