ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು : ನೂರಾರು ಎಕರೆ ಪ್ರದೇಶದಲ್ಲಿದ್ದ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮ
Mullaiyanagiri hill : ಚಿಕ್ಕಮಗಳೂರು ತಾಲೂಕಿನ ವಿಶ್ವ ಪ್ರಸಿದ್ಧ ಮುಳ್ಳಯ್ಯನ ಗಿರಿಯ ಗುಡ್ಡದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿನ ವಿವಿಧ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ.
Hundreds of acres of were burnt : ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯ ಬೈರೇಗುಡ್ಡದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು,ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ
ಮುಳ್ಳಯ್ಯನಗಿರಿ ಸಮೀಪದ ಬೈರೇಗುಡ್ಡ ಸಮೀಪ ಹೊತ್ತಿದ ಕಾಡ್ಗಿಚ್ಚು ಕವಿಕಲ್ ಗಂಡಿ ಅರಣ್ಯದವರೆಗೂ ಗುಡ್ಡದಿಂದ ಗುಡ್ಡಕ್ಕೆ ವ್ಯಾಪಿಸಿದೆ.
ಇದನ್ನು ಓದಿ : WhatsApp ನಲ್ಲಿ Quality ಕಡಿಮೆಯಾಗದಂತೆ HD ಗುಣಮಟ್ಟದ ಫೋಟೋ ಶೇರ್ ಮಾಡುವ ಸಿಂಪಲ್ ಟ್ರಿಕ್
ಬೈರೇಗುಡ್ಡ ಅತ್ಯಂತ ಎತ್ತರ, ಅರಣ್ಯ ಹಾಗೂ ಇಳಿಜಾರಿನ ಪ್ರದೇಶವಾಗಿದೆ. ಮುಳ್ಳಯ್ಯನಗಿರಿಯಲ್ಲಿ ಬೀಸುವ ಭಾರೀ ಗಾಳಿಗೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ್ದರಿಂದ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಕಾಡ್ಗಿಚ್ಚಿನ ಸ್ಥಳಕ್ಕೆ ಹೋಗಲಾರದೇ ಅರಣ್ಯಾಧಿಕಾರಿಗಳು ಪರದಾಡುವಂತಾಗಿದೆ.
ಅರಣ್ಯಾಧಿಕಾರಿಗಳು ಕೂಡ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಸ್ಥಳದಲ್ಲೇ ಇದ್ದರೂ ಕೂಡ ಬೆಂಕಿಯನ್ನ ನಂದಿಸಲು ಸಾಧ್ಯವಾಗಿಲ್ಲ. ಅತ್ಯಂತ ಎತ್ತರ ಹಾಗೂ ಇಳಿಜಾರಿನ ಪ್ರದೇಶದ ಬೈರೇಗುಡ್ಡದ ಬಳಿ ಹೋಗಲು ಕಷ್ಟಸಾಧ್ಯ. ಬಿಸಿಲ ಝಳಕ್ಕೆ ಸಂಪೂರ್ಣ ಒಣಗಿ ನಿಂತಿರುವ ಅರಣ್ಯ ಯಾವ ಪ್ರಮಾಣದಲ್ಲಿ ಹೊತ್ತಿ ಉರಿಯುತ್ತದೆ ಎಂದು ಊಹಿಸುವುದು ಕಷ್ಟವಾಗಿದೆ.
ಇದನ್ನು ಓದಿ : Karthik Aryaan: ಬೆಂಗಳೂರಿನ ರಸ್ತೆಬದಿಯಲ್ಲಿ ತಿಂಡಿ ಸವೆದ ಬಾಲಿವುಡ್ ಸ್ಟಾರ್!
ಬೇಸಿಗೆಯ ವೇಳೆ ಬಂಡೀಪುರ ಅರಣ್ಯ ಪ್ರದೇಶ, ಮುಳ್ಳಯ್ಯನಗಿರಿ ಗುಡ್ಡಗಾಡು ಪ್ರದೇಶ ಸೇರಿ ರಾಜ್ಯದ ಹಲವೆಡೆ ಕಾಡ್ಗಿಚ್ಚು, ಅಗ್ನಿ ದುರಂತಗಳು ಸಂಭವಿಸುತ್ತವೆ. ಆದರೆ, ಬೇಸಿಗೆ ಆರಂಭಕ್ಕೂ ಮೊದಲೇ ಕಾಡ್ಗಿಚ್ಚು ಆವರಿಸಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.