ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ
ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಬೊಮ್ಮಾಯಿ, ಪ್ರತಿ ವರ್ಷ 1 ವಾರ ಮಳೆ ವಿಳಂಬವಾದರೆ ಕೃಷಿ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಬೆಂಗಳೂರು: ಪ್ರತಿ ವರ್ಷ ಮಳೆ 1 ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ 50 ಲಕ್ಷ ರೂ. ಬಿಡುಗಡೆ ಮಾಡಿ, ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕೊನೆಗೂ ಮಾದಪ್ಪನ ಭಕ್ತರಿಗೆ 4 ಹೊಸ ಬಸ್... ಭಕ್ತರ ಜೀವದೊಟ್ಟಿಗೆ ಚೆಲ್ಲಾಟ ಆಡುತ್ತಿದ್ದ ಪ್ರಾಧಿಕಾರ!!
ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ 1 ವಾರ ಮಳೆ ವಿಳಂಬವಾದರೆ ಕೃಷಿ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಎಡೆ ಬಿಡದೇ ಆರ್ಭಟಿಸಲಿದ್ದಾನೆ ವರುಣ ! ಇಂದಿನಿಂದ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್
ರೈತರು ಬಿತ್ತನೆ ಮಾಡಿದರೂ ಮೊಳಕೆ ಒಡೆಯದಿದ್ದರೆ ಅದಕ್ಕೆ ವಿಮೆ ಕೂಡ ಬರುವುದಿಲ್ಲ. ಹವಾಮಾನ ಇಲಾಖೆಯ ಮುನ್ಸೂಚನೆ ನಂಬಿ ಕೂಡಬೇಡಿ, ಅವರು ಮುಂದಿನ 5 ದಿನ ನಿರಂತರ ಮಳೆ ಅಂತಾ ಹೇಳಿದ್ದಾರೆ. ಆದರೆ ಎಲ್ಲಾ ಕಡೆ ನಿರ್ದಿಷ್ಟ ಮಳೆ ಆಗುತ್ತಿಲ್ಲ. ನೀವು ವಾಸ್ತವ ನೋಡಿ ಕೆಲಸ ಮಾಡಬೇಕು. ಅದಕ್ಕಾಗಿ ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಅಲ್ಲದೇ ಪ್ರತಿ ಜಿಲ್ಲೆಗೂ ತಕ್ಷಣ 50 ಲಕ್ಷ ರೂ.ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.