ಕುಂದುಕೊರತೆ ನಿವಾರಣಾ ಸಮಿತಿ ರಚನೆ: ಅರ್ಹ ಹಾಗೂ ಆಸಕ್ತಿಯುಳ್ಳ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ವ್ಯಾಪಾರ ನಿಯಂತ್ರಣ) ನಿಯಮ-೨೦೧೯ರಡಿ ನಗರ ಸ್ಥಳೀಯ ಸಂಸ್ಥೆಯ ಮಟ್ಟದಲ್ಲಿ ಬೀದಿ ವ್ಯಾಪಾರಿಗಳ ವ್ಯಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕುಂದುಕೊರತೆ ನಿವಾರಣಾ ಸಮಿತಿ ರಚಿಸಬೇಕಾಗಿದೆ. ಇದಕ್ಕಾಗಿ ಅರ್ಹ ಹಾಗೂ ಆಸಕ್ತಿಯುಳ್ಳ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿನ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

Written by - Manjunath N | Last Updated : Jul 17, 2023, 05:00 PM IST
  • ಈ ಸಮಿತಿಯಲ್ಲಿ ೩ ಜನ ಸದಸ್ಯರಿದ್ದು, ಇದರಲ್ಲಿ ಓರ್ವ ನಿವೃತ್ತ ನ್ಯಾಯಾಧೀಶರನ್ನು ನೇಮಿಸಬೇಕಾಗಿರುತ್ತದೆ
  • ರಾಜ್ಯ ಸರ್ಕಾರದ ಸೇವೆಯಲ್ಲಿನ ‘ಎ’ ಗ್ರೇಡ್ ನಿವೃತ್ತ ಅಧಿಕಾರಿ ಹಾಗೂ ಬೀದಿ ಬದಿ ವ್ಯಾಪಾರದ ಕ್ಷೇತ್ರದಲ್ಲಿ ಅನುಭವವುಳ್ಳ ಸಾಮಾಜಿಕ ಕಾರ್ಯಕರ್ತರಾಗಿರಬೇಕು.
  • ವಯೋಮಿತಿ ೬೫ ವರ್ಷದೊಳಗಿರಬೇಕು
 ಕುಂದುಕೊರತೆ ನಿವಾರಣಾ ಸಮಿತಿ ರಚನೆ: ಅರ್ಹ ಹಾಗೂ ಆಸಕ್ತಿಯುಳ್ಳ ವ್ಯಕ್ತಿಗಳಿಂದ ಅರ್ಜಿ ಆಹ್ವಾನ title=
file photo

ಕಲಬುರಗಿ: ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ವ್ಯಾಪಾರ ನಿಯಂತ್ರಣ) ನಿಯಮ-೨೦೧೯ರಡಿ ನಗರ ಸ್ಥಳೀಯ ಸಂಸ್ಥೆಯ ಮಟ್ಟದಲ್ಲಿ ಬೀದಿ ವ್ಯಾಪಾರಿಗಳ ವ್ಯಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕುಂದುಕೊರತೆ ನಿವಾರಣಾ ಸಮಿತಿ ರಚಿಸಬೇಕಾಗಿದೆ. ಇದಕ್ಕಾಗಿ ಅರ್ಹ ಹಾಗೂ ಆಸಕ್ತಿಯುಳ್ಳ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿನ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ-ಕೊಟ್ಟ ಮಾತಿನಂತೆ PTCL ಕಾಯ್ದೆ ತಿದ್ದುಪಡಿ ತರಲು ಮುಂದಾಗಿದ್ದೇವೆ: ಸಿದ್ದರಾಮಯ್ಯ

ಈ ಸಮಿತಿಯಲ್ಲಿ ೩ ಜನ ಸದಸ್ಯರಿದ್ದು, ಇದರಲ್ಲಿ ಓರ್ವ ನಿವೃತ್ತ ನ್ಯಾಯಾಧೀಶರನ್ನು ನೇಮಿಸಬೇಕಾಗಿರುತ್ತದೆ. ರಾಜ್ಯ ಸರ್ಕಾರದ ಸೇವೆಯಲ್ಲಿನ ‘ಎ’ ಗ್ರೇಡ್ ನಿವೃತ್ತ ಅಧಿಕಾರಿ ಹಾಗೂ ಬೀದಿ ಬದಿ ವ್ಯಾಪಾರದ ಕ್ಷೇತ್ರದಲ್ಲಿ ಅನುಭವವುಳ್ಳ ಸಾಮಾಜಿಕ ಕಾರ್ಯಕರ್ತರಾಗಿರಬೇಕು. ವಯೋಮಿತಿ ೬೫ ವರ್ಷದೊಳಗಿರಬೇಕು. ಬೆಂಗಳೂರಿನ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಅಭಿಯಾನದ ನಿರ್ದೇಶಕರು ಈ ಸಮಿತಿ ರಚಿಸಬೇಕೆಂದು ನಿರ್ದೇಶನ ನೀಡಿರುತ್ತಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರೇ ಕೆಲವು ದಿನಗಳ ಮಟ್ಟಿಗೆ ನಿಮ್ಮ ಕಲೆಕ್ಷನ್ ವ್ಯವಹಾರ ನಿಲ್ಲಿಸಿ: ಬಿಜೆಪಿ ಟೀಕೆ

ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ೨೦೨೩ರ ಜುಲೈ 28 ರೊಳಗಾಗಿ ಕಲಬುರಗಿ ಮಹಾಗನರ ಪಾಲಿಕೆಯ ಡೇ-ನಲ್ಮ್ ಶಾಖೆಯ ಕೊಠಡಿ ಸಂಖ್ಯೆ ೪೭ರಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪಾಲಿಕೆಯ ಸಮುದಾಯ ಸಂಘಟನಾಧಿಕಾರಿ (ಡೇ-ನಲ್ಮ್) ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News