Vilasbabu Alamelakar: ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ್ ನಿಧನ

Former MLA Vilasababu Alamelakar Passed Away: ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ್ ಅವರು ಪತ್ನಿ ಮತ್ತು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Written by - Zee Kannada News Desk | Last Updated : Sep 3, 2023, 12:42 PM IST
  • ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ (64) ನಿಧನ
  • ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ
  • ಚಿಕಿತ್ಸೆ ಫಲಕಾರಿಯಾಗದೇ ವಿಜಯಪುರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ
Vilasbabu Alamelakar: ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ್ ನಿಧನ title=
ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ ನಿಧನ

ವಿಜಯಪುರ: ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ್ ಇಂದು(ಸೆಪ್ಟೆಂಬರ್ 2) ಬೆಳಗ್ಗೆ ನಿಧನ ಹೊಂದಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ರೀಲ್ಸ್ ಮಾಡುವ ಆಂಟಿಯರೇ ಟಾರ್ಗೆಟ್: ಫೇಕ್ ಐಡಿಯಲ್ಲಿ ಪಟಾಯಿಸಿ ಚಕ್ಕಂದವಾಡ್ತಿದ್ದ ಖದೀಮ ಅಂದರ್

ವಿಲಾಸಬಾಬು ಆಲಮೇಲಕರ್ ಅವರು ಪತ್ನಿ ಮತ್ತು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಕ್ಷೇತ್ರ ಮರುವಿಂಗಡಣೆ ಪೂರ್ವದಲ್ಲಿ ಅಸ್ತಿತ್ವದಲ್ಲಿದ್ದ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದಿಂದ ವಿಲಾಸಬಾಬು ಶಾಸಕರಾಗಿದ್ದರು.

ಮಾಜಿ ಶಾಸಕ ವಿಲಾಸಬಾಬು ಅವರ ನಿಧನಕ್ಕೆ ವಿಜಯಪುರ ಜಿಲ್ಲೆಯ ಸಚಿವರು, ಶಾಸಕರು, ಸ್ಥಳಿಯ ಜನಪ್ರತಿಗಳು, ಮಠಾಧೀಶರು ಸೇರಿದಂತೆ ಅನೇಕರು‌ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೊಲೀಸಪ್ಪನಿಂದ ಪತ್ನಿಗೆ ವರದಕ್ಷಿಣೆ ಕಿರುಕುಳ.. ರಕ್ಷಣೆ ನೀಡಬೇಕಿದ್ದ ಆರಕ್ಷಕನಿಂದಲೇ ಟಾರ್ಚರ್!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News