ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ವಿಧಿವಶ
ಕೇದೆ ಸುಬ್ಬ ಪೂಜಾರಿ - ದೇವಕಿ ದಂಪತಿಯ ಪ್ರಥಮ ಪುತ್ರರಾಗಿ 1946ರ ಜನವರಿ 15ರಂದು ಜನಿಸಿದ ವಸಂತ್ ಬಂಗೆರ್ ಅವರು ಬಿಜೆಪಿ ಪಕ್ಷದಿಂದ 1983 ರಲ್ಲಿ ಮೊದಲ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೇದೆ ಸುಬ್ಬ ಪೂಜಾರಿ - ದೇವಕಿ ದಂಪತಿಯ ಪ್ರಥಮ ಪುತ್ರರಾಗಿ 1946ರ ಜನವರಿ 15ರಂದು ಜನಿಸಿದ ವಸಂತ್ ಬಂಗೆರ್ ಅವರು ಬಿಜೆಪಿ ಪಕ್ಷದಿಂದ 1983 ರಲ್ಲಿ ಮೊದಲ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.ತದನಂತರ 1985 ಮತ್ತೆ ಬಿಜೆಪಿಯಿಂದ ಶಾಸಕರಾಗಿದ್ದರು.1994ರಲ್ಲಿ ಜನತಾದಳದಿಂದ ಹಾಗೂ 2008 ಮತ್ತು 2013ರಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಮತಗಟ್ಟೆಗೆ ಬರುವ ಮತದಾರರ ಆರೋಗ್ಯ ಕಾಳಜಿಗೆ ಮೆಡಿಸಿನ್ ಕಿಟ್ ಸಿದ್ದ..!
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲನ್ನು ಅನುಭವಿಸಿದ್ದರು.ಬಿಲ್ಲವ ಸಮುದಾಯಕ್ಕೆ ಸೇರಿದ ಅವರು ಜನಾನುರಾಗಿಯಾಗಿದ್ದ ಅವರು ಶಾಸಕ ಸ್ಥಾನ ಕಳೆದುಕೊಂಡ ಮೇಲೂ ರಾಜಕೀಯವಾಗಿ ಜಿಲ್ಲೆಯಲ್ಲಿ ತಮ್ಮ ಪ್ರಭಾವ ಉಳಿಸಿಕೊಂಡಿದ್ದರು.
ಕೆ.ವಸಂತ ಬಂಗೇರ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ "ನನ್ನ ಆತ್ಮೀಯ ಗೆಳೆಯ ಮತ್ತು ದೀರ್ಘ ಕಾಲದ ಸಹದ್ಯೋಗಿ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನೇರ, ನಿಷ್ಠುರ ನಡೆ-ನುಡಿಯ ಬಂಗೇರ, ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ. ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಮಾತನಾಡಿಸಿದ್ದೆ. ಇಷ್ಟು ಬೇಗ ನಮ್ಮನ್ನು ಅಗಲಿ ಹೋಗುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಬಂಗೇರ ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ" ಎಂದು ಕಂಬನಿ ಮಿಡಿದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.