ತುಮಕೂರು: ಕಾಂಗ್ರೆಸ್ ಸರ್ಕಾರ ಈಗಾಗಲೇ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಕುಮಾರಸ್ವಾಮಿಯವರು ಎರಡು ಬಾರಿ ಸಿಎಂ ಆದವರು, ಎರಡು ಬಾರಿ ಅಧಿಕಾರ ಕಳೆದುಕೊಂಡಿದ್ದಾರೆ. ಈ ಸರ್ಕಾರ ಆಡಳಿತ ನಡೆಸುವ ವಿಶ್ವಾಸ ಕಳೆದುಕೊಂಡಿದೆ. ಜನರೇ ಈ ಸರ್ಕಾರದ ಆಡಳಿತದ ಬಗ್ಗೆ ಬೇಸರಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇನ್ನು ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮಿಳುನಾಡಿಗೆ ನೀರು ಬಿಡದಿದ್ದರೆ ನಮ್ಮ ಅಧಿಕಾರ ಹೋಗುತ್ತದೆ ಅಂತ ಹೇಳುತ್ತಾರೆ. ಇವರು ಅಧಿಕಾರಕ್ಕಾಗಿ ರಾಜ್ಯದ ಹಿತ ಬಲಿ ಕೊಡುತ್ತಿದ್ದಾರೆ. ಇವರು ಬಹಿರಂಗ ಹೇಳಿಕೆ ನಿಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಕೊರ್ಟ್ ನಲ್ಲಿ ವಾದ ಮಾಡಬೇಕು. ಸುಪ್ರೀಂ ಕೊರ್ಟ್ ನಲ್ಲಿ ಈಗಿನ ವಾಸ್ತವ ಸ್ಥಿತಿ ಹೆಳಿದರೆ ನ್ಯಾಯಾಂಗ ನಿಂದನೆ ಆಗುವುದಿಲ್ಲ. ಅಧಿಕಾರವು ಹೋಗುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ : ಕಳ್ಳತನದಿಂದ ಕಾವೇರಿ ನೀರು ಬಿಟ್ಟಿರುವುದೇ ದೊಡ್ಡ ತಪ್ಪು : ಈಶ್ವರಪ್ಪ ಆಕ್ರೋಶ
ಇದೇ ವೇಳೆ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಕಾರಣಕ್ಕೆ ಹಿಂದೂ ಕಾರ್ಯಕರ್ತನ ಬಂಧನ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದ ಅವಧಿಯಲ್ಲಿ ಫೇಕ್ ನ್ಯೂಸ್ ಹೆಸರಿನಲ್ಲಿ ಬೆದರಿಕೆ ಹಾಕುವ ಕೆಲಸ ನಡೆಸಲಾಗುತ್ತಿದೆ. ಫೆಕ್ ನ್ಯೂಸ್ ಅಂತ ಹೇಳಿ ಎಲ್ಲರನ್ನು ಬೆದರಿಸಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡುತ್ತಿದ್ದಾರೆ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.
ಶಾಮನೂರು ಶಿವ ಶಂಕರ ಅವರು ಹಿರಿಯರು, ಅವರು ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿದ್ದಾರೆ. ಅವರು ಲಿಂಗಾಯತ ಅಧಿಕಾರಿಗಳಿಗೆ ಬೆಲೆ ಅಂತ ಹೇಳಿದ್ದರೆ ಅದು ಮುಂದಿನ ದಿನಗಳಲ್ಲಿ ಪರಿಣಾಮ ಬೀರಲಿದೆ ಎಂದು ಹೇಳಿದರು.
ಇದನ್ನೂ ಓದಿ : ಅಡ್ಜಸ್ಟ್‌ಮೆಂಟ್ ರಾಜಕಾರಣಿ, ಛದ್ಮವೇಷಧಾರಿ, ಡೋಂಗಿ ಸಮಾಜವಾದಿ: ಸಿದ್ದು ವಿರುದ್ಧ ಎಚ್‍ಡಿಕೆ ವಾಗ್ದಾಳಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.