ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಜನಪ್ರಿಯತೆ ಬಹಳ ದಿನ ಉಳಿಯಲ್ಲ; ಮಾಜಿ ಸಿಎಂ ಕಿಡಿ!

Basavaraj Bommai: ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕಾಂಗ್ರೇಸ್‌ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ

Written by - Zee Kannada News Desk | Last Updated : Jun 18, 2023, 04:05 PM IST
  • ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಜನಪ್ರಿಯತೆ ಬಹಳ ದಿನ ಉಳಿಯಲ್ಲ ಎಂದು ಮಾಜಿ ಸಿಎಂ ಕಿಡಿ
  • ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬೊಮ್ಮಾಯಿ
  • ಅಕ್ಕಿ ಕೊಡದಿದ್ದರೇ ಪ್ರತಿಭಟನೆ ನಡೆಸಲಾಗುವುದು
ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಜನಪ್ರಿಯತೆ ಬಹಳ ದಿನ ಉಳಿಯಲ್ಲ;  ಮಾಜಿ ಸಿಎಂ ಕಿಡಿ! title=

ಹುಬ್ಬಳ್ಳಿ: ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು.

ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆಯದಾದರೆ ಸಾಕು ಎಂದರು.

ಇದನ್ನೂ ಓದಿ: ಶಕ್ತಿ ಯೋಜನೆಯಿಂದ ಹೆಚ್ಚಾದ ಮಹಿಳಾ ಪ್ರವಾಸ..ರೊಚ್ಚಿಗೆದ್ದ ಪುರುಷರು;ವಿಡಿಯೋ ವೈರಲ್‌ ! 

ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.

ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಬೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದರು.

ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನ ಪ್ರೀಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತಗೆದುಕೊಂಡು ಏನು ಮಾಡಬೇಕು ಎಂದರು.‌ಇನ್ನು‌ ಇದೇ ವೇಳೆ ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News