Congress administration: ಕಾಂಗ್ರೆಸ್ ನ ದುರಹಂಕಾರ, ಆಡಳಿತದ ಆಯಸ್ಸು ಲೋಕಸಭಾ ಚುನಾವಣೆಯವರೆಗೆ ಮಾತ್ರ - ಬೊಮ್ಮಾಯಿ‌

Congress Administration: ಕಾಂಗ್ರೆಸ್‌ ಆಡಳಿತದ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ನೂತನವಾಗಿ ಸರ್ಕಾರ ರಚನೆ ಆಗಿದೆ.

Written by - Zee Kannada News Desk | Last Updated : May 26, 2023, 05:55 PM IST
  • ಕಾಂಗ್ರೆಸ್‌ ಆಡಳಿತದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ
  • ದ್ವೇಷದ, ಸೇಡಿನ ರಾಜಕಾರಣ ಮಾಡಲು ಪ್ರಾರಂಭ ಮಾಡಿದ್ದಾರೆ ಎಂದ ಮಾಜಿ ಮುಖ್ಯಮಂತ್ರಿ
  • ಚುನಾಯಿತ ಸರ್ಕಾರದ ಮುಂದೆ ಜನರ ಸಮಸ್ಯೆಗಳಿವೆ
Congress administration: ಕಾಂಗ್ರೆಸ್ ನ ದುರಹಂಕಾರ, ಆಡಳಿತದ ಆಯಸ್ಸು ಲೋಕಸಭಾ ಚುನಾವಣೆಯವರೆಗೆ ಮಾತ್ರ - ಬೊಮ್ಮಾಯಿ‌ title=

ಬೆಂಗಳೂರು: ಕಾಂಗ್ರೆಸ್‌ ಆಡಳಿತದ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ನೂತನವಾಗಿ ಸರ್ಕಾರ ರಚನೆ ಆಗಿದೆ.

8 ಜನರು ಕೂಡ ಸಚಿವರು ಆಗಿದ್ದಾರೆ. ಆ ಸಚಿವರು ಮಾತನಾಡುವುದನ್ನು ನೋಡಿದರೆ, ದ್ವೇಷದ, ಸೇಡಿನ ರಾಜಕಾರಣ ಮಾಡಲು ಪ್ರಾರಂಭ ಮಾಡಿದ್ದಾರೆ. ಅಭಿವೃದ್ಧಿಗಿಂತ ಸೇಡು, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅವರು ಏನೇ ಮಾಡಿದರೂ, ಅದನ್ನು ಎದರಿಸಲು ನಾವು ಸಿದ್ದರಿದ್ದೇವೆ. ಇದನ್ನು ನಾವು ಸಮರ್ಥವಾಗಿ ಎದುರಿಸುವುದಲ್ಲದೇ, ಅವರ ವಿಚಾರವನ್ನು ನಾವು ಹಿಮ್ಮೆಟ್ಟಿಸುತ್ತೇವೆ ಎಂದರು.

ಇದನ್ನೂ ಓದಿ: Viral Video : ಇದೊಂದು ಬಾಕಿ ಇತ್ತು ನೋಡಿ: ಹಣೆ ಮೇಲೆ ಪತಿಯ ಹೆಸರನ್ನು ಟ್ಯಾಟೂ ಹಾಕಿಸಿಕೊಂಡ ಪತ್ನಿ !

ಚುನಾಯಿತ ಸರ್ಕಾರದ ಮುಂದೆ ಜನರ ಸಮಸ್ಯೆಗಳಿವೆ. ಸಮಸ್ಯೆಗಳ ಬಗೆಹರಿಸಲು ತುರ್ತಾದ ನಿರ್ಣಯ ಎಲ್ಲೂ ಕಾಣುತ್ತಿಲ್ಲ. ರಾಜ್ಯದಲ್ಲಿ ಇವತ್ತು ಕುಡಿಯುವ ನೀರಿನ ಸಮಸ್ಯೆ ದೊಡ್ಡದಾಗಿದೆ. ಆದರೆ, ಆ ಸಮಸ್ಯೆ ಬಗೆಹರಿಸುವ ಬಗ್ಗೆ ಗಮನ ಕೊಟ್ಟಿಲ್ಲ.

ಕೇವಲ ಸೂಚನೆ ಕೊಡುವುದರಲ್ಲಿ ಕಾಳ ಕಳೆಯುತ್ತಿದ್ದಾರೆ. ಹಣ ಕೂಡ ಬಿಡುಗಡೆ ಮಾಡಿಲ್ಲ. ಬರ ಪೀಡಿತ ತಾಲ್ಲೂಕುಗಳು, ಕುಡಿಯುವ ನೀರಿನ ತಾಲ್ಲೂಕುಗಳ ಬಗ್ಗೆ ಪತ್ತೆ ಹಚ್ಚಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸಾಕಷ್ಟು ಹಣ ಇದೆ. ಅದನ್ನು ಬಳಸಿಕೊಂಡು ಸಮಸ್ಯೆ ಬಗೆಹರಿಸಿ ಎಂಬ ಸೂಚನೆ ಸಿಎಂ ರಿಂದಲೂ ಹೋಗಿಲ್ಲ ಎಂದರು.

ಇದನ್ನೂ ಓದಿ: HD Kumaraswamy: ರಾಷ್ಟ್ರಪತಿ ದ್ರೌಪದಿ ಮುರ್ಮು ಆದಿವಾಸಿ ಮಹಿಳೆ ಎಂಬ ಕಾರಣಕ್ಕೆ ಅವರ ಬಗ್ಗೆ ʼಕಾಂಗ್ರೆಸ್ʼ ಮೊಸಳೆ ಕಣ್ಣೀರು - ಹೆಚ್.ಡಿ ಕೆ

ಸಚಿವರಿಗೆ ಇನ್ನೂ ಖಾತೆಯೇ ಆಗಿಲ್ಲ. ಅವರಿಗೆ ಇನ್ನೂ ಅಧಿಕಾರನೇ ಸಿಕ್ಕಿಲ್ಲ. ಕೇವಲ ಇವ್ರು ಅಧಿಕಾರಕ್ಕಾಗಿ ಬಡಿದಾಡುತ್ತಿದ್ದಾರೆ. ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಕೇಳಿದ್ದೇನೆ. ನಾನು ನನಗೋಸ್ಕರ ಈ ಮಾತು ಕೇಳಿಲ್ಲ. ಜನರಿಗಾಗಿ ಈ ಮಾತು ಕೇಳಿದ್ದೇನೆ. ಈ ರೀತಿಯ ಆಡಳಿತವನ್ನು ನಾನು ಹಿಂದೆಂದು ನೋಡಿಲ್ಲ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News