ಬೆಂಗಳೂರು:  ಲಾಕ್‌ಡೌನ್ ಮೂರನೇ ವಾರದ ಮುಕ್ತಾಯಕ್ಕೆ ಬರುತ್ತಿದ್ದರೂ ಬೆಳೆದ ಬೆಳೆ  ಮಾರಾಟವಾಗದೆ ಜಮೀನಿನಲ್ಲೇ ಕೊಳೆಯುತ್ತಿರುವುದನ್ನು ಕಂಡು ರೈತರು 'ಹೆತ್ತ ಮಕ್ಕಳು' ಅಕಾಲ ಮರಣಕ್ಕೀಡಾದಂತೆ ಸಂಕಟ ಪಡುತ್ತಿದ್ದಾರೆ. ರೈತರ ಸಂಕಷ್ಟ ಪರಿಹರಿಸಲು ಪ್ರತಿ ಗ್ರಾಮಗಳಲ್ಲೂ ಪ್ರತಿಯೊಬ್ಬ ರೈತರು ಬೆಳೆದ ಬೆಳೆಗಳನ್ನೂ ಸಮೀಕ್ಷೆ ಮಾಡಿ ಮೂರು ದಿನದಲ್ಲಿ ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.


COMMERCIAL BREAK
SCROLL TO CONTINUE READING

ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, 'ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣಿಕೆ ಮತ್ತು ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ  ಇನ್ನೂ ಕ್ರಿಯಾಶೀಲವಾಗಿಲ್ಲ. ಬರೀ ಚಿಂತನ-ಮಂಥನದಲ್ಲೇ ಕಾಲ ಕಳೆಯುವುದನ್ನು ಬಿಟ್ಟು ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು' ಎಂದಿದ್ದಾರೆ.


ಕುಮಾರಸ್ವಾಮಿ ಅವರಿಂದ ಸೋಂಕು ನಿವಾರಕ ಟನಲ್‌ಗಳ ಸ್ಥಾಪನೆ


ಇನ್ನೊಂದು ಟ್ವೀಟ್ ನಲ್ಲಿ 'ರಾಜ್ಯಾದ್ಯಂತ ದಾಳಿಂಬೆ, ದ್ರಾಕ್ಷಿ, ಬಾಳೆ, ಕಲ್ಲಂಗಡಿ, ಕರ್ಬುಜ, ಮಾವು ಸೇರಿದಂತೆ ಹೂವು ತರಕಾರಿ ಉತ್ಪನ್ನಗಳನ್ನು ಬೆಳೆದ ರೈತರು ಸಾಗಾಣೆ, ಮಾರುಕಟ್ಟೆ  ಸಿಗದೆ ಅಲ್ಲೇ ಕೊಳೆಸುವ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿರುವ ಪ್ರಸಂಗಗಳು ದಿನನಿತ್ಯ ಹೆಚ್ಚಾಗುತ್ತಿವೆ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಮಂಡ್ಯ, ತುಮಕೂರು ಜಿಲ್ಲೆಯ ಶಾಸಕರೊಂದಿಗೆ ಎಚ್‌ಡಿಕೆ ವಿಡಿಯೋ ಕಾನ್ಫರೆನ್ಸ್

ಮಗದೊಂದು ಟ್ವೀಟ್ ನಲ್ಲಿ‌ 'ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ  ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು. ಲಾಕ್ ಡೌನ್ ಮುಂದುವರಿಕೆ ನಿಚ್ಚಳವಾಗಿರುವ ಹಿನ್ನೆಲೆಯಲ್ಲಿ ತುರ್ತು ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸುತ್ತೇನೆ' ಎಂದಿದ್ದಾರೆ.