ಬೆಂಗಳೂರು: ರಾಜ್ಯದ ಜನತೆ COVID-19 ಸಂಕಷ್ಟಕ್ಕೆ ಸಿಲುಕಿರುವುದರಿಂದ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿಎಸ್ ನಾಯಕರೂ ಆದ ಎಚ್.ಡಿ. ಕುಮಾರಸ್ವಾಮಿ, "ಡಿ.16ರಂದು ನನ್ನ ಜನ್ಮದಿನ. ಕೊರೋನಾ (Coronavirus) ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು" ಎಂದು ಹೇಳಿದ್ದಾರೆ.
ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ.
ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು.
1/2— H D Kumaraswamy (@hd_kumaraswamy) December 14, 2020
ಅನ್ನದಾತರ ಮೇಲೆ ಕಿಡಿ ಕಾರಿದ ಹೆಚ್.ಡಿ. ಕುಮಾರಸ್ವಾಮಿ
ಇದಲ್ಲದೆ ಇನ್ನೊಂದು ಟ್ವೀಟ್ ನಲ್ಲಿ "ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ" ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ.
2/2— H D Kumaraswamy (@hd_kumaraswamy) December 14, 2020
ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಸಬೇಡಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ
ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಕೂಡ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.